Karnataka News

*ಆಟವಾಡುವಾಗ ಕರೆಂಟ್ ಶಾಕ್ ಹೊಡೆದು 5 ವರ್ಷದ ಬಾಲಕ ಸಾವು*

ಪ್ರಗತಿವಾಹಿನಿ ಸುದ್ದಿ: ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದಾಗ ವಿದ್ಯುತ್ ತಗುಲಿ ಐದು ವರ್ಷದ ಸಂಜೀವ್ ಎಂಬ ಬಾಲಕ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದಿದೆ.

ಆಟವಾಡುವ ವೇಳೆ ಅವಿತುಕೊಳ್ಳಲು ಮನೆಯ ಬಾಗಿಲು ಮುಚ್ಚಿದ್ದಾನೆ. ಆಗ ವಿದ್ಯುತ್ ಶಾಕ್ ಹೊಡೆದು ಸಂಜೀವ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಬಾಲಕನನ್ನು ರಕ್ಷಿಸಲು ಹೋದ ತಾಯಿಗೂ ವಿದ್ಯುತ್ ಶಾಕ್ ತಗುಲಿ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. 

Home add -Advt

ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮಗುವನ್ನು ಕಳೆದುಕೊಂಡಿರುವ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

Related Articles

Back to top button