Belagavi NewsBelgaum NewsKarnataka News
*ಕೃಷ್ಣಾ ನದಿಯಲ್ಲಿ ಹೆಚ್ಚಿದ ನೀರಿನ ಪ್ರವಾಹ: ನದಿ ಪಾತ್ರದ ಜನತೆಗೆ ಕಟ್ಟೆಚ್ಚರಕ್ಕೆ ಸೂಚಿಸಿದ ಚಿಕ್ಕೋಡಿ ತಾಲೂಕು ಆಡಳಿತ*

ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಿದೆ. ನದಿ ಪಾತ್ರದ ಜನತೆಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಹಿಪ್ಪರಗಿ ಜಲಾಶಯದಿಂದ ಕೃಷ್ಣಾ ನದಿಗೆ 40 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಕೃಷ್ಣಾ ನದಿಯಲ್ಲಿ 25 ಸಾವಿರ ಕ್ಯೂಸೆಕ್ ಗಿಂತಲು ಹೆಚ್ಚು ಒಳಹರಿವು ಇದೆ. ನದಿ ಪಾತ್ರದ ಜನರು ನದಿಗೆ ಇಳಿಯದಂತೆ ಸೂಚಸಲಾಗಿದೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿ ಆಡಳಿತ ಕೃಷ್ಣಾ ನದಿ ಪಾತ್ರದಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಿದೆ. ನದಿಯತ್ತ ಯಾರೂ ಹೋಗದಂತೆ ತಿಳಿಸಿದೆ.
ನಿರಂತರವಾಗಿ ಸುರುಯುತ್ತಿರುವ ಮಳೆಗೆ ಕೊಲ್ಲಾಪುರ ಪಂಚಗಂಗಾ ನದಿಯ ಒಳಹರಿವು ಪ್ರಮಾಣ ಹೆಚ್ಚಾಗಿದೆ. ಇದರಿಂದಾಗಿ ಪಂಚಗಂಗಾನದಿಗೆ ಅಡ್ದಲಾಗಿ ಕಟ್ಟಲಾಗಿದ್ದ ಹಲವು ಬ್ರಿಡ್ಜ್ ಕಮ್ ಬ್ಯಾರೇಜ್ ಗಳು ಮುಳುಗಡೆಯಾಗಿವೆ. ಈ ಪ್ರದೇಶದಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ.