
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಪದವಿ ಪೂರ್ವ ವಸತಿ ಕಾಲೇಜುಗಳಿಗೆ ಮತ್ತು ಉನ್ನತೀಕರಿಸಿದ ಮೌಲಾನಾ ಆಜಾದ ಪದವಿ ಪೂರ್ವ ಕಾಲೇಜುಗಳಿಗೆ 2025-26ನೇ ಸಾಲಿನಲ್ಲಿ ಪ್ರಥಮ ಪಿ.ಯು.ಸಿ ತರಗತಿ ಪ್ರವೇಶಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹರು ಮೆ 31 ರ ಒಳಗಾಗಿ http://sevasindhuservices.karnataka.gov.in ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲ ತಾಣ http://dom.karnataka.in ದಿಂದ ಮಾಹಿತಿಯನ್ನು ಪಡೆಯಬಹುದಾಗಿದೆ.
ವಿಶೇಷ. ಸೂಚನೆ: ಮೇ.3, ರಿಂದ ಮೇ. 22 ರವರೆಗೆ ಅರ್ಜಿ ಸಲ್ಲಿಸಿರುವ ಅರ್ಹ ವಿದ್ಯಾರ್ಥಿಗಳ ಪಟ್ಟಿಯನ್ನು ಮೊದಲನೇ ಸುತ್ತಿನ ಆಯ್ಕೆ ಪಟ್ಟಿಯಲ್ಲಿ ಪ್ರಕಟಿಸಲಾಗುವುದು. ನಂತರ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ಮುಂದಿನ ಸುತ್ತಿನ ಆಯ್ಕೆ ಪಟ್ಟಿಯಲ್ಲಿ ಪರಿಗಣಿಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.