Latest

*ಮಾಸ್ಕ್ ಧರಿಸಿ ಕಟ್ಟಡಕ್ಕೆ ನುಗ್ಗಿದ ದುರುಳ: ವಿದ್ಯಾರ್ಥಿನಿ ಬೆನ್ನುಬಿದ್ದು ಲೈಂಗಿಕ ಕಿರುಕುಳ: ಕಾಮುಕನ ಕೃತ್ಯ ಸಿಸಿಟಿವಿಯಲ್ಲಿ ಸೆರೆ*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿನಿಯರು, ಯುವತಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಮಾಸ್ಕ್ ಧರಿಸಿ ಬಂದ ವ್ಯಕ್ತಿಯೊಬ್ಬ ಹಾದಹಗಲೇ ವಿದ್ಯಾರ್ಥಿಯರಿಗೆ ಇನ್ನಿಲ್ಲದ ರೀತಿಯಲ್ಲಿ ಕಾಡಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ಮಾಸ್ಕ್ ಧರಿಸಿ ಕಟ್ಟಡವೊಂದನ್ನು ಪ್ರವೇಶಿಸಿದ ವ್ಯಕ್ತಿ ವಿದ್ಯಾರ್ಥಿಯ ಬೆನ್ನು ಬಿದ್ದಿದ್ದು, ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ವಿದ್ಯಾರ್ಥಿಯ ಸ್ಕರ್ಟ್ ಹಿಡಿದೆಳೆದು, ಸ್ಕರ್ಟ್ ಎತ್ತಿ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆ. ಕಟ್ಟಡದ ಎದುರು ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ವಿದ್ಯಾರ್ಥಿನಿ ಆತನಿಂದ ತಪ್ಪಿಸಿಕೊಳ್ಳಲು ಪರದಾಡುತ್ತಿರುವ ದೃಶ್ಯವನ್ನೂ ಕಾಣಬಹುದು.

ಮೆಘಾಲಯದ ಶಿಲ್ಲಾಂಗ್ ನಲ್ಲಿ ಈ ಘಟನೆ ನಡೆದಿದೆ. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಪೊಲೀಸರು ಕಾಮುಕನ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ ಎಂದು ಎಸ್ ಪಿ ವಿವೇಕ್ ಸೈಮ್ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button