Karnataka News

KSRTC ಬಸ್-ಬೈಕ್ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಮತ್ತಿಹಳ್ಳಿ ಬಳಿ ಈ ಘಟನೆ ನಡೆದಿದೆ. ಮೃತರನ್ನು ರಜನಿಂಕಾತ್ (33) ಹಾಗೂ ಉಮೇಶ್ (22) ಎಂದು ಗುರುತಿಸಲಾಗಿದೆ.

Home add -Advt

ರಸ್ತೆ ಕಾಮಗಾರಿ ನಡೆಯುತ್ತಿದ್ದುದರಿಂದ ಕಿರಿದಾದ ರಸ್ತೆಯಲ್ಲಿ ವೇಗವಾಗಿ ಬಂದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

Related Articles

Back to top button