Belagavi NewsBelgaum NewsKarnataka News

*ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿಂದಿನಂತೆ ಕೋವಿಡ್ ಜನರ ಜೀವವನ್ನು ಹಿಂಡುತ್ತಿದೆ. ಕುಂದಾನಗರಿ ಬೆಳಗಾವಿಯಲ್ಲಿ ಕೋವಿಡ್ ಮಹಾಮಾರಿ ವ್ಯಕ್ತಿಯೊಬ್ಬರನ್ನು ಬಲಿ ಪಡೆದಿದೆ.

ಬೆಳಗಾವಿಯಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದ್ದು, ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ಬೆಳಗಾವಿ ತಾಲೂಕಿನ ಬೆನಕನಹಳ್ಳಿಯ 70 ವರ್ಷದ ವೃದ್ಧರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.

Home add -Advt


Related Articles

Back to top button