Belagavi NewsBelgaum NewsKannada NewsKarnataka NewsLatest

*ಹಲವು ಪೊಲೀಸ್ ಅಧಿಕಾರಿಗಳ ಹಠಾತ್ ವರ್ಗಾವಣೆ*

ಭೂಷಣ್ ಬೋರ್ಸೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬೆಳಗಾವಿ ಪೊಲೀಸ್ ಆಯುಕ್ತರು ಸೇರಿದಂತೆ ರಾಜ್ಯದ ಹಲವು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಮಂಗಳೂರು ಪೊಲೀಸ್ ಆಯುಕ್ತ ಅನುಪಮ ಅಗರವಾಲ ಅವರನ್ನು ಆರ್ಥಿಕ ಅಪರಾಧ ಮತ್ತು ಕ್ರಿಮಿನಲ್ ಇನ್ವೆ,ಸ್ಟಿಗೇಶನ್ ಡಿಪಾರ್ಟ್ ಮೆಂಟ್ ಗೆ ವರ್ಗಾಯಿಸಲಾಗಿದೆ. ಅವರ ಜಾಗಕ್ಕೆ ಸುಧೀರ್ ಕುಮಾರ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.

ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅರುಣ ಅವರನ್ನು ಮಂಗಳೂರು ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ಉಡುಪಿಗೆ ಹರಿರಾಮ ಶಂಕರ ಅವರನ್ನು ಎಸ್ಪಿಯಾಗಿ ನೇಮಕ ಮಾಡಲಾಗಿದೆ.

ಭೂಷಣ್ ಬೋರ್ಸೆ ಅವರನ್ನು ಬೆಳಗಾವಿ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಬೆಳಗಾವಿ ಪೊಲೀಸ್ ಆಯುಕ್ತ ಇಡಾ ಮಾರ್ಟಿನ್ ಅವರಿಗೆ ಸ್ಥಳ ತೋರಿಸಲಾಗಿಲ್ಲ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button