Belagavi NewsBelgaum NewsKarnataka News

*ಬೆಳಗಾವಿಯಲ್ಲಿ ಮತ್ತೊಂದು ಕೋವಿಡ್ ಪ್ರಕರಣ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಕುಂದಾನಗರಿ ಬೆಳಗಾವಿಯಲ್ಲಿ ಕೋವಿಡ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಿನ್ನೆಯಶ್ಟೇ ಬಿಮ್ಸ್ ಆಸ್ಪತ್ತೆಯಲ್ಲಿ ಕೊರೊನಾ ಸೋಂಕಿಗೆ ವ್ಯಕ್ತಿಯೊರ್ವರು ಬಲಿಯಾದ ಘಟನೆ ನಡೆದಿತ್ತು ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಕೊವಿಡ್‌ ಪ್ರಕರಣ ಪತ್ತೆಯಾಗಿದೆ.

72 ವರ್ಷದ ವೃದ್ಧನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

ಸೋಂಕಿತರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಜಿಲ್ಲೆಯಲ್ಲಿ 3 ಕೊವಿಡ್‌ ಆಕ್ಟೀವ್‌ ಕೇಸ್‌ಗಳಿದ್ದು ಇನ್ನೂ 11 ಜನರ ವರದಿಗಾಗಿ ಆರೋಗ್ಯ ಇಲಾಖೆ ಕಾಯುತ್ತಿದೆ.

ಮಹಾರಾಷ್ಟ್ರ ಗಡಿಭಾಗಕ್ಕೆ ಹೊಂದಿಕೊಂಡ ಹಳ್ಳಿಗಳಲ್ಲಿಯೇ ಕೋವಿಡ್ ಕೇಸ್ ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button