Politics

*2 ದಿನಗಳ ಪ್ರಗತಿ ಪರಿಶೀಲನೆ ಸಭೆ ಆರಂಭ* *ಆರಂಭದಲ್ಲೇ ಖಡಕ್ ಕ್ಲಾಸ್ ತೆಗೆದುಕೊಂಡ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದರಾಮಯ್ಯ ಜಿಲ್ಲಾಧಿಕಾರಿಗಳು, ಸಿಇಓಗಳು, ಇಲಕಹೆ ಅದಿಕಾರಿಗಳ ಜೊತೆ ಇಂದಿನಿಂದ ಎರಡು ದಿನಗಳ ಕಾಲ ಸಭೆ ನಡೆಸಲಿದ್ದಾರೆ. ವಿಧಾನಸೌಧದಲ್ಲಿ ಅಧಿಕಾರಳ ಜೊತೆ ಸಭೆ ಆರಂಭವಾಗಿದ್ದು, ಖಡಕ್ ಸೂಚನೆಗಳನ್ನು ನೀಡಿದರು

ಸಭೆಯ ಆರಂಭದಲ್ಲಿ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನೀಡಿದ ಸೂಚನೆಗಳು

*ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಇತ್ತೀಚಿನ ದಿನಗಳಲ್ಲಿ ಇಂತಹ ಶಕ್ತಿಗಳು ತಲೆಎತ್ತುತ್ತಿದ್ದು, ಅಂತಹ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳೂ ಯಾರೇ ಆಗಿದ್ದರೂ, ಅವರನ್ನು ಮಟ್ಟ ಹಾಕುವುದು ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕಾದುದು ಡಿಸಿ, ಸಿಇಒ, ಎಸ್ಪಿಗಳ ಜವಾಬ್ದಾರಿ ತಾನೇ ಎಂದು ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು.

*ಹಿಂದಿನ ಸಭೆಯಲ್ಲಿ ನೀಡಿದ ಸೂಚನೆಗಳು, ತೆಗೆದುಕೊಂಡ ನಿರ್ಣಯಗಳಲ್ಲಿ ಕೆಲವು ಇಲಾಖೆಗಳು ಶೇ100 ರಷ್ಟು ಪ್ರಗತಿ ತೋರಿಸಿಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ರಾಜಿ ಇಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಮೇಲೆ ನಿಷ್ಠುರವಾಗಿ ಕ್ರಮ ಕೈಗೊಳ್ಳುವುದು ನಮಗೆ ಅನಿವಾರ್ಯ ಆಗುತ್ತದೆ.

Home add -Advt

*ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳು ಮತ್ತು ಸಿಇಒ ಗಳು ತಮ್ಮ ಅಹಂ ಬದಿಗೊಟ್ಟಿ ಸಮನ್ವಯದಿಂದ ಕೆಲಸ ಮಾಡಿದರೆ ಮಾತ್ರ ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯ. ಈ ಉದ್ದೇಶಕ್ಕೇ ನೀವುಗಳು ಐಎಎಸ್‌ ಮಾಡಿರುವುದು. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

*10-10-1949 ರಂದು ಸಂವಿಧಾನ ಜಾರಿ ಸಭೆಯಲ್ಲಿ ಇಂಡಿಯನ್‌ ಸಿವಿಲ್‌ ಸರ್ವೀಸ್‌ ಬೇಕಾ ಎಂದು ಚರ್ಚೆ ಆಗಿ ಐಎಎಸ್‌ ಬೇಕು ಎನ್ನುವ ನಿರ್ಧಾರಕ್ಕೆ ಬರಲಾಗಿದೆ. ಆ ಸಭೆಯಲ್ಲಿ ವಲ್ಲಭಾಬಾಯಿ ಪಟೇಲರು “ದೇಶವನ್ನು ನೈಜ ಸ್ವಾತಂತ್ರ್ಯ ಹೋರಾಟಗಳ ಆಶಯದಲ್ಲಿ ಮುನ್ನಡೆಸಲು ಐಎಎಸ್‌ ಸೇವೆ ಇರಬೇಕು, ಇದರ ನೈಜ ಕಾಳಜಿಯನ್ನು ನೀವು ಅರ್ಥ ಮಾಡಿಕೊಳ್ಳಬೇಕು. ಸಾಮಾಜಿಕ ನ್ಯಾಯ

*ವಲ್ಲಭಬಾಯಿ ಅವರ ಮಾತನ್ನು ನಾವು ಅರ್ಥಮಾಡಿಕೊಳ್ಳಬೇಕು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡುವವರ ವಿರುದ್ಧ ಮತ್ತು ಜನಪರ ಆಶಯಗಳಿಗೆ ಸ್ಪಂದಿಸದಿದ್ದರೆ ಅವರ ವಿರುದ್ಧ ನಾವು ಕ್ರಮ ಕೈಗೊಳ್ಳಬೇಕಾಗುತ್ತದೆ. ನೀವೆಲ್ಲಾ ಸಂವಿಧಾನ ಓದಿದ್ದೀರಿ, ಅದರ ಆಶಯಗಳಿಗೆ, ಧ್ಯೇಯೋದ್ದೇಶಗಳಿಗೆ ಬದ್ದರಾಗಿದ್ದೀರಿ ಎಂದು ನಂಬಿದ್ದೇನೆ. ಇದನ್ನು ಕಾರ್ಯ ರೂಪಕ್ಕೆ ತರುವುದರಲ್ಲಿ ವಿಫಲರಾದವರ ವಿರುದ್ಧ ನಾನು ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲು ನಿರ್ಧಿರಿಸಿದ್ದೇನೆ ಎಂದು ಎಚ್ಚರಿಸಿದರು.

*ಸಂವಿಧಾನ ವಿರೋಧಿ, ಜನ ವಿರೋಧಿ ದುಷ್ಟ ಶಕ್ತಿಗಳು ಕೆಲವು ಕಡೆ ಬಾಲ ಬಿಚ್ಚುತ್ತಿವೆ. ಅವರು ಎಷ್ಟೇ ಪ್ರಭಾವಿ ಆಗಿರಲಿ, ಕಾನೂನು ಹಾಳು ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಿ. ಇಲ್ಲದಿದ್ದರೆ ನಿಮ್ಮ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿಮತ್ತು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

*ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಇವೆರಡಕ್ಕೂ ನೇರಾ ನೇರಾ ಸಂಬಂಧವಿದೆ.

*ಕಾನೂನು ಸುವ್ಯವಸ್ಥೆ ಹದಗೆಟ್ಟರೆ, ಅಭಿವೃದ್ಧಿ ಕುಂಟಿತವಾದಂತೆ. ಇದಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ನೇರ ಹೊಣೆ ಎಂದು ಎಚ್ಚರಿಸಿದರು.

*ನಾವು ಜನರ ತೆರಿಗೆ ದುಡ್ಡಿನಲ್ಲಿ ಆಡಳಿತ ನಡೆಸುತ್ತಿದ್ದೇವೆ. ನಾವು ಮತ್ತು ನೀವು ಎಲ್ಲಾ ಸವಲತ್ತುಗಳನ್ನು ಅನುಭವಿಸುತ್ತಿರುವುದು ಜನರ ತೆರಿಗೆ ಹಣದಿಂದ ಎನ್ನುವುದನ್ನು ಮರೆಯಬಾರದು. ಕಾರು, ಮನೆ ಸೇರಿ ಎಲ್ಲಾ ಸವಲತ್ತುಗಳನ್ನು ನಾವು ಕೊಟ್ಟಿರುವುದು ತೆರಿಗೆ ಹಣದಲ್ಲಿ. ಆದ್ದರಿಂದ ಜನಪರ ಧೋರಣೆಯಲ್ಲಿ ಕೆಲಸ ಮಾಡಬೇಕು. ಇದೇ ಪ್ರಜಾಪ್ರಭುತ್ವದ ಮೂಲ ಆಶಯ.

*ಜಿಲ್ಲಾ ಮಟ್ಟದ ಶಾಂತಿ ಸಮಿತಿ ಅಧ್ಯಕ್ಷರು ಜಿಲ್ಲಾಧಿಕಾರಿಗಳೇ ಆಗಿರ್ತಾರೆ. ಶಾಂತಿ ಕಾಪಾಡಲು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಶಾಂತಿಭಂಗ ಆದ ಮೇಲೆ ಪೋಸ್ಟ್‌ ಮಾರ್ಟಂ ಮಾಡುತ್ತಾ ಕೂರಬಾರದು. ಮೊದಲೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಏನು ಸಮಸ್ಯೆ ನಿಮಗೆ ಎಂದು ಪ್ರಶ್ನಿಸಿದರು.

*ಬಾಲ್ಯ ವಿವಾಹ ಆಗುವುದು ಜಿಲ್ಲಾಧಿಕಾರಿಗಳ ಗಮನಕ್ಕೆ ಏಕೆ ಬರುವುದಿಲ್ಲ? ನಿಮ್ಮ ಕೆಳಗಿನವರು ನಿಮಗೆ ವರದಿ ಮಾಡುವುದಿಲ್ಲವೇ? ಕೆಳಗಿನವರು ನಿಮಗೆ ಹೇಳದಿದ್ದರೆ ನಿಮಗೆ ದಕ್ಷತೆ ಇಲ್ಲ ಎಂದು ಅರ್ಥ. ನಿಮಗೆ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲ, ನಿಮ್ಮ ಬಗ್ಗೆ ಅವರಿಗೆ ಭಯ ಇಲ್ಲ ಎಂದೇ ಅರ್ಥ ಎಂದು ತರಾಟೆಗೆ ತೆಗೆದುಕೊಂಡರು.

*ಈ ವರ್ಷ 700 ಬಾಲ್ಯ ವಿವಾಹ ನಡೆದಿದೆ, ಬಾಲ್ಯದಲ್ಲೇ ತಾಯಂದಿರಾದ ಘಟನೆಗಳೂ ವರದಿಗಳಾಗಿವೆ. ಈ ಬಗ್ಗೆ ಹಲವು ಕಡೆ ಎಫ್‌ ಐಆರ್‌ ಕೂಡ ದಾಖಲಾಗಿಲ್ಲ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಸ್ವಾತಂತ್ರ್ಯ ಬಂದು ಇಷ್ಟ ವರ್ಷಗಳಾದರೂ 7೦೦ ಬಾಲ್ಯ ವಿವಾಹ ನಡೆಯುತ್ತಿದೆ ಎಂದರೆ ಹೇಗೆ? ಬಾಲ್ಯವಿವಾಹ ತಡೆಗೆ ಕಾಯ್ದೆ, ಕಾನೂನುಗಳಿವೆ. ಆದರೂ ಇದನ್ನು ಪರಿಣಾಮಕಾರಿಯಾಗಿ ಕೆಲವು ಕಡೆ ಬಳಸಿಲ್ಲ. ಇದು ತಪ್ಪಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು.

• ಜಿಲ್ಲಾಧಿಕಾರಿಗಳು, ಸಿಇಒಗಳು ತಮ್ಮ ಪ್ರವಾಸ ಕಾರ್ಯಕ್ರಮ ಮೊದಲೇ ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು*

*ತಪಾಸಣಾ ವರದಿಗಳನ್ನು ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಬೇಕು. ಜಿಲ್ಲೆಯಲ್ಲಿ ಶಾಲೆಗಳು, ಹಾಸ್ಟೆಲ್ಗಳು , ವಸತಿ ಶಾಲೆಗಳು, ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸಲು ನಿರಂತರವಾಗಿ ಭೇಟಿ ನೀಡಬೇಕು. ಮುನ್ಸೂಚನೆ ಇಲ್ಲದೇ ಇಂತಹ ಭೇಟಿಯನ್ನು ಪ್ರತಿ ತಿಂಗಳು ಕಡ್ಡಾಯವಾಗಿ ನಡೆಸಬೇಕು ಎಂದು ಪದೇ ಪದೇ ಸೂಚನೆ ನೀಡಿದ್ದೇನೆ. ಆದರೂ ಕೆಲವರು ಇದನ್ನು ಪಾಲಿಸಿಲ್ಲ ಎನ್ನುವ ವರದಿ ನನಗೆ ಬಂದಿದೆ.

*ನಿಮ್ಮ ಅಧೀನದಲ್ಲಿರುವ ಇಲಾಖೆಗಳು, ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸುವುದು ನಿಮ್ಮ ಜವಾಬ್ದಾರಿ. ನೀವು ದಕ್ಷತೆಯಿಂದ ಕಾರ್ಯನಿರ್ವಹಿಸದಿದ್ದರೆ ಅಧೀನ ಅಧಿಕಾರಿಗಳು ಕಾರ್ಯನಿರ್ವಹಿಸುವುದನ್ನು ಹೇಗೆ ನಿರೀಕ್ಷಿಸಬಹುದು?

• ಜಿಲ್ಲೆಯಲ್ಲಿ ಜನಸಾಮಾನ್ಯರಿಗೆ ಆರೋಗ್ಯ, ಸಾರಿಗೆ ಸಂಚಾರದಂತಹ ಮೂಲಭೂತ ಸೌಕರ್ಯಗಳು ಲಭಿಸದಿದ್ದರೆ ಅದನ್ನು ಆಡಳಿತದ ವೈಫಲ್ಯವೆಂದೇ ಪರಿಗಣಿಸಬೇಕಾಗಿದೆ. ಹಾಡಿಗಳಲ್ಲಿ ಶಾಲೆ, ರಸ್ತೆ, ಆಸ್ಪತ್ರೆಯಂತಹ ಮೂಲಸೌಲಭ್ಯ ಒದಗಿಸಲು ಇಂದಿಗೂ ಸರಿಯಾಗಿ ಯಾಕೆ ಸಾಧ್ಯವಾಗಿಲ್ಲ; ಅವರಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಸರಿಯಾಗಿ ಹಕ್ಕು ಒದಗಿಸಲು ಯಾಕೆ ಸಾಧ್ಯವಾಗಿಲ್ಲ. ಜಿಲ್ಲಾಧಿಕಾರಿಗಳು, ಸಿಇಒಗಳು ಇಂತಹ ಹಾಡಿಗಳಿಗೆ ನಿರಂತರ ಭೇಟಿ ನೀಡಬೇಕು.

• ಕೆಲವು ಜಿಲ್ಲಾಧಿಕಾರಿಗಳು, ಸಿಇಒಗಳು ಸರಿಯಾಗಿ ಕಚೇರಿಯಲ್ಲಿ ಸಾರ್ವಜನಿಕರಿಗೆ ಲಭ್ಯವಾಗದಿರುವ ಬಗ್ಗೆ ದೂರುಗಳು ಬಂದಿವೆ. ಸಾರ್ವಜನಿಕ ಭೇಟಿಯ ಅವಧಿಯನ್ನು ಮೊದಲೇ ಪ್ರಕಟಿಸಬೇಕು. ಶೋಷಿತರು, ಬಡವರು, ಜನಸಾಮಾನ್ಯರು ಸಾಮಾನ್ಯವಾಗಿ ಜಿಲ್ಲಾಧಿಕಾರಿ ಅವರ ಕಚೇರಿಗೆ ಬರುತ್ತಾರ. ಅಂತವರ ಸಂಕಷ್ಟಗಳನ್ನು ನೀವೇ ಆಲಿಸದಿದ್ದರೆ ಅದನ್ನು ಬಗೆಹರಿಸುವವರು ಯಾರು? ಯಾರ ಬಳಿ ಅವರು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಬೇಕು?

• ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ವಾಸವಿರಬೇಕು. ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ಲಭ್ಯವಿದ್ದು, ಜನರಿಗೆ ಲಭ್ಯವಿರಬೇಕು. ಇದನ್ನು ಜಿಲ್ಲಾಧಿಕಾರಿಗಳು ಖಾತ್ರಿಪಡಿಸಬೇಕು. ಕೇಂದ್ರ ಸ್ಥಾನದಲ್ಲಿರದ ಅಧಿಕಾರಿಗಳ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆ ನನಗೆ ವರದಿ ನೀಡಬೇಕು.

• ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಿಂಗಳಲ್ಲಿ ಕನಿಷ್ಟ ಎರಡು ಬಾರಿ ಆಯಾ ಜಿಲ್ಲೆಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಬೇಕು. ಅದರೊಂದಿಗೆ ಶಾಲೆ, ಹಾಸ್ಟೆಲ್, ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ವರದಿಯನ್ನು ಮುಖ್ಯ ಕಾರ್ಯದರ್ಶಿಯವರಿಗೆ ಸಲ್ಲಿಸಬೇಕು.

ಕೆರೆ ಒತ್ತುವರಿ ಗರಂ ಆದ ಸಿಎಂ

ಒಂದೂ ಕೆರೆ ಒತ್ತುವರಿ ತೆರವುಗೊಳಿಸಿದ ಜಿಲ್ಲಾಧಿಕಾರಿ, ಸಿಇಓ ಗಳ ವಿರುದ್ಧ ಸೂಕ್ತ ಕ್ರಮಕ್ಕೆ ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಿದ ಸಿಎಂ

ಸಭೆಯ ವೇಳೆ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಿದರು.

ಎರಡು ಮೂರು ಜಿಲ್ಲೆಗಳಲ್ಲಿ ಒಂದೂ ಕೆರೆ ಒತ್ತುವರಿ ಮಾಡದಿರುವುದನ್ನು ಗಮನಿಸಿ ಗರಂ ಆದ ಮುಖ್ಯಮಂತ್ರಿಗಳು, ಆ ಬಗ್ಗೆ ವರದಿ ತರಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಭೆಯಲ್ಲೇ ಸೂಚನೆ ನೀಡಿದರು.

ರಾಜ್ಯದ ಸಮಗ್ರ ಪ್ರಗತಿ ಪರಿಶೀಲನೆಗಾಗಿ ಬೆಂಗಳೂರಿನ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಓಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಎಚ್ ಕೆ ಪಾಟೀಲ್, ಜಿ ಪರಮೇಶ್ವರ, ಕೆ ಜೆ ಜಾರ್ಜ್, ಕೃಷ್ಣ ಬೈರೇಗೌಡ, ಕೆ ಎಚ್ ಮುನಿಯಪ್ಪ, ಚಲುವರಾಯಸ್ವಾಮಿ, ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್, ಶಿವಾನಂದ ಪಾಟೀಲ್, ವೆಂಕಟೇಶ್, ಎಂ ಸಿ ಸುಧಾಕರ್, ಬೋಸರಾಜ್, ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಭಾಗವಹಿಸಿದ್ದರು.

Related Articles

Back to top button