Politics

*ಸಭೆಯಿಂದ ಸಚಿವ ದಿನೇಶ್ ಗುಂಡೂರಾವ್ ಹಾಗೂ DC ಯನ್ನು ಕಳಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ, ಗುಡ್ದ ಕುಸಿತ ಸಂಭವಿಸಿ ಅನಾಹುತವಾಗಿದ್ದು, ತಕ್ಷಣ ತೆರಳುವಂತೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ರಾತ್ರಿ ಬಿದ್ದ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂ ಕುಸಿತ, ಗೋಡೆ ಕುಸಿತ ಆಗಿ ಸಾವು ಸಂಭವಿಸಿರುವ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಿದ ಮುಖ್ಯಮಂತ್ರಿಗಳು, ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡು ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ದ.ಕ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.‌


Related Articles

Back to top button