
ಪ್ರಗತಿವಾಹಿನಿ ಸುದ್ದಿ: ಬೆಳ್ಳಂ ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಾಗಲಕೋಟೆ, ಗದಗ, ಹಾವೇರಿ, ಹುನಗುಂದ ಸೇರಿದಂತೆ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಗದಗ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ್ ಶಿರೋಳ ಅವರ ಕಚೇರಿ ಸೇರಿ ಆರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗಂಗಾಧರ್ ಅವರ ಅಳಿಯ, ಭಾವನ ಮೆಗಳ ಮೇಲೂ ದಾಳಿ ನಡೆದಿದೆ.
ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿಯಲ್ಲಿಯೂ ಲೋಕಾಯುಕ್ತ ದಾಳಿ ನಡೆದಿದೆ. ಹಾವೇರಿ, ಬಾಗಲಕೋಟೆಯ ಜಿಲ್ಲಾ ಪಂಚಾಯತ್ ಅಕೌಂಟೆಂಟ್ ಶ್ರೀಶೈಲ್ ತತ್ರಾಣಿ ಅವರ ಮನೆ ಮೇಲೆ ದಾಳಿ ನಡೆದಿದೆ. ಹುನಗುಂದ ತಾಲೂಕಿನ ಅಮೀನಗಢದಲ್ಲಿರುವ ಮೂರು ಮನೆಗಳ ಮೇಲೆ ದಾಳಿ ನಡೆಸಲಾಗಿದೆ.