Politics

*ಆನೆ, ಮಾನವ ಸಂಘರ್ಷಕ್ಕೆ Honey ಯೋಜನೆ ಬಗ್ಗೆ ಸಚಿವ ಸಂತೋಷ್ ಲಾಡ್ ಸಲಹೆ: ಏನಿದು ಯೋಜನೆ?*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹಲವು ಕಡೆ ಆನೆ, ಮಾನವ ಸಂಘರ್ಷದ ವೇಳೆ ಪ್ರಾಣಹಾನಿ ಆಗಿರುವ ಬಗ್ಗೆ ಮತ್ತು ಇದಕ್ಕೆ ವೈಜ್ಞಾನಿಕ ಪರಿಹಾರ ಒದಗಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು.

ಈ ವೇಳೆ ಸಚಿವ ಸಂತೋಷ್ ಲಾಡ್ ಅವರು , “Honey fencing, ಜೇನು ಕೃಷಿ” ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಿಸಿದರು. ಈ ಯೋಜನೆ ಮೂಲಕ ಆನೆ, ಮಾನವ ಸಂಘರ್ಷ ತಡೆಯಬಹುದು ಎಂದರು.

ಆನೆಗಳು ಜೇನು ನೊಣ ಇರುವ ಪ್ರದೇಶಕ್ಕೆ ಬರುವುದಿಲ್ಲ. ಹೀಗಾಗಿ ಆನೆ ಬ್ಯಾರಿಕೇಡ್ ಹಾಕಿರುವ ಮಾರ್ಗದುದ್ದಕ್ಕೂ ಜೇನು ಕೃಷಿ ಮಾಡಿದರೆ ರೈತರಿಗೂ ಅನುಕೂಲ, ಆನೆಗಳ ಕಾಟವೂ ತಪ್ಪುತ್ತದೆ ಎಂದು ವಿವರಿಸಿದರು.


Related Articles

Back to top button