
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಕಲಬುರಗಿಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಎಸ್ ಡಿ ಪಿಐ ಮುಖಂಡ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಕಲಬುರಗಿಯ ಸಿಇಎನ್ ಠಾಣೆಯಲ್ಲಿ ಮಣಿಕಂಠ ರಾಠೋಡ್ ವಿರುದ್ಧ ಪ್ರಕರಣ ದಾಖಲಾಗಿದೆ.
ಮಣಿಕಂಠ ರಾಠೋಡ್, ಫೇಸ್ ಬುಕ್ ನಲ್ಲಿ ಮುಸ್ಲಿಮರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಮುಸ್ಲಿಂ ಸಮುದಾಯವನ್ನು ನರಮೇಧ ಮಾಡುವುದಾಗಿ ಪೋಸ್ಟ್ ಹಾಕಿದ್ದಾಗಿ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.