
ಪ್ರಗತಿವಾಹಿನಿ ಸುದ್ದಿ: ಆಟೋ ಚಾಲಕನ ಮೇಲೆ ಚಪ್ಪಲಿಂದ ಹೊಡೆದು ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಬೆಳ್ಳಂದೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಆಟೋ ಚಾಲಕ ಲೋಕೇಶ್ ಎಂಬುವವರ ನ್ನು ಮಹಿಳೆ ಚಪ್ಪಲಿಯಿಂದ ಹೊಡೆದಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿತ್ತು. ಮೇ ೨೮ರಂದು ಈ ಘಟನೆ ನಡೆದಿತ್ತು.
ಬಿಹಾರ ಮೂಲದ ಪನ್ಸೂರಿ ಎಂಬ ಮಹಿಳೆ ತನ್ನ ಪತಿಯೊಂದಿಗೆ ತೆರಳುತ್ತಿದ್ದ ವೇಳೆ ದ್ವಿಚಕ್ರವಾಹನಕ್ಕೆ ಹಿಂದಿನಿಂದ ಆಟೋ ಡಿಕ್ಕಿಯಾಗಿತ್ತು. ಇದರಿಂದ ಕೋಪಗೊಂಡ ಮಹಿಳೆ ಏಕಾಏಕಿ ಆಟೋ ಚಾಲಕನಿಗೆ ಚಪ್ಪಲಿ ತೆಗೆದು ಬಾರಿಸಿದ್ದಾಳೆ. ಆಟೋ ಚಾಲಕ ಬೆಳ್ಳಂದೂರು ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್ಐಆರ್ ದಾಖಲಾಗಿದೆ.
ಸದ್ಯ ಮಹಿಳೆಯನ್ನು ಠಾಣೆಗೆ ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮಹಿಳೆ ಆಟೋ ಡಿಕ್ಕಿಯಾಗಿದ್ದಕ್ಕೆ ಕೋಪದಲ್ಲಿ ಚಾಲಕನಿಗೆ ಹೊಡೆದಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.