Belagavi NewsBelgaum NewsKarnataka News

*ಬಾಲಕಿ ಮೇಲೆ ಗ್ಯಾಂಗ್ ರೇಪ್: ಇಬ್ಬರು ಅಪ್ರಾಪ್ತರು ಸೇರಿ ಐವರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬೆಳಗವಿಯಲ್ಲಿ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯ ಸ್ನೇಹಿತ ಆಕೆಯನ್ನು ಪುಸಲಾಯಿಸಿ ಕಾಕತಿ ಬಳಿಯ ಗುಡ್ದಕ್ಕೆ ಕರೆದೊಯ್ದಿದ್ದ. ಈ ವೇಳೆ ಆತ ಸೇರಿ ಆರು ಜನರ ಗ್ಯಾಂಗ್ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆಸಿದೆ. ಕೃತ್ಯದ ವಿಡಿಯೋ ಮಾಡಿಕೊಂಡಿದೆ. ಬಳಿಕ ಬಾಲಕಿಗೆ ಬ್ಲ್ಯಾಕ್ ಮೇಲ್ ಮಾಡಿ ಬೆದರಿಕೆಯೊಡ್ಡಿ ಮತ್ತೆ ಕರೆದೊಯ್ದು ಕಾಮುಕರು ಅತ್ಯಾಚಾರ ನಡೆಸಿದ್ದಾರೆ. ಈ ಘಟನೆ ಬಳಿಕ ಈಗ ಮತ್ತೆ ಬಾಲಕಿಗೆ ಬೆದರಿಕೆಯೊಡ್ದಿದ್ದ ಹಿನ್ನೆಲೆಯಲ್ಲಿ ಸಂತ್ರಸ್ತೆ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ಡಳು.

ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಬಗ್ಗೆ ಬೆಳಗಾವಿ ನಗರ ಪೊಲೀಸ್ ಕಮಿಷನರ್ ಭೂಷಣ್ ಗುಲಾಬರಾವ್ ಮಾಹಿತಿ ನೀಡಿದ್ದು, ಇಬ್ಬರು ಕಾನೂನು ಸಂಘರ್ಷಕ್ಕೆ ಒಳಪಟ್ಟವರು ಸೇರಿ ಐವರನ್ನು ಬಂಧಿಸಲಾಗಿದೆ. ಪರಾರಿಯಾಗಿರುವ ಇನ್ನೋರ್ವನಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಕರಣ ದಾಖಲಾದ 24 ಗಂಟೆಯೊಳಗೆ ಕಾನೂನು ಸಂಘರ್ಷಕ್ಕೆ ಒಳಪಟ್ಟಿರುವ ಇಬ್ಬರನ್ನು ವಶಕ್ಕೆ ಪಡೆದಿದ್ದು, ಮೂವರನ್ನು ಬಂಧಿಸಲಾಗಿದೆ. ನಾಪತ್ತೆಯಾಗಿರುವ ಇನ್ನೋರ್ವನಿಗಾಗಿ ಜಾಲ ಬೀಸಿದ್ದೇವೆ ಎಂದು ತಿಳಿಸಿದ್ದಾರೆ. ಸಂತ್ರಸ್ತೆ ಹಾಗೂ ಆರೋಪಿಗಳು ಬೆಳಗಾವಿಯವರೇ ಆಗಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವುದಾಗಿ ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button