Film & Entertainment

*ಥಗ್ ಲೈಫ್ ಸಿನಿಮಾ ಬಿಡುಗಡೆಗೆ ರಾಜ್ಯದಲ್ಲಿ ನಿರ್ಬಂಧ ಹಿನ್ನೆಲೆ: ಹೈಕೋರ್ಟ್ ಮೆಟ್ಟಿಲೇರಿದ ಕಮಲ್ ಹಾಸನ್ ಒಡೆತನದ ಸಂಸ್ಥೆ*

ಪ್ರಗತಿವಾಹಿನಿ ಸುದ್ದಿ: ಕನ್ನಡದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ, ಕನ್ನಡಿಗರ ಕ್ಷಮೆ ಕೇಳದೇ ಉದ್ಧಟತನ ಮೆರೆಯುತ್ತಿರುವ ಬಹುಭಾಷಾ ನಟ ಕಮಲ್ ಹಾಸನ್ ವಿರುದ್ಧ ಕನ್ನಡಿಗರ ಆಕ್ರೋಶ ಹೆಚ್ಚುತ್ತಿದ್ದು, ಈ ನಡುವೆ ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ನಿರ್ಬಂಧ ವಿಧಿಸಲಾಗಿದೆ.

Home add -Advt

ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳುವವರೆಗೂ ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಅವಕಾಶ ನೀಡಲ್ಲ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ತಿಳಿಸಿದೆ. ಇದರ ಬೆನ್ನಲ್ಲೇ ಸಿನಿಮಾ ನಿರ್ಮಾಪಕರಿಗೆ, ವಿತರಕರಿಗೆ ಸಂಕಷ್ಟ ಎದುರಾಗಿದೆ.

ಕರ್ನಾಟಕದಲ್ಲಿ ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ನಿರ್ಬಂಧ ಹಿನ್ನೆಲೆಯಲ್ಲಿ ನಿರ್ಮಾಪಕರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಚಿತ್ರದ ಸಹ ನಿರ್ಮಾಪಕ ರಾಜ್ ಕಮಲ್ ಫಿಲ್ಮ್ ಇಂಟರ್ ನ್ಯಾಷನಲ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ.

ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆಗೆ ನಿರ್ಬಂಧ ಹೇರುತ್ತಿದ್ದಂತೆ ಕಮಲ್ ಹಾಸನ್ ಒಡೆತನದ ಸಂಸ್ಥೆಯಿಂದಲೇ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು, ಚಿತ್ರ ಬಿಡುಗಡೆಗೆ ಅವಕಾಶ ನೀದುವಂತೆ ಮನವಿ ಮಾಡಲಾಗಿದೆ.

Related Articles

Back to top button