
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ವೃದ್ಧೆಯನ್ನೂ ಬಿಡದ ಕಾಮುಕನೊಬ್ಬ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಶ್ರೀನಿವಾಸಪುರದ ಹೆಚ್.ಜಿ.ಹೊಸೂರು ಗ್ರಾಮದ 80 ವರ್ಷದ ವೃದ್ಧೆ ಲಕ್ಷ್ಮೀದೆವಮ್ಮ ಕೊಲೆಯಾದ ಮಹಿಳೆ. ಕೋಲಾರ ಜಿಲ್ಲೆಯ ಶ್ರೀನಿವಸಪುರ ತಾಲೂಕಿನಲ್ಲಿ ಈ ಘಟನೆ ನಡೆದಿದೆ.
ಬಸ್ ಗಾಗಿ ಕಾಯುತ್ತಿದ್ದ ವೃದ್ಧೆಯ ಬಳಿ ಬಂದ ವ್ಯಕ್ತಿಯೊಬ್ಬ ಆಕೆಯನ್ನು ಹೊತ್ತೊಯ್ದು ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ. ಬಳಿಕ ವೃದ್ಧೆತ ಬ್ಯಾಗ್ ನಲ್ಲಿದ್ದ 15 ಸಾವಿರ ಹಣ ದೋಚಿ ಪರಾರಿಯಾಗಿದ್ದಾರೆ.
ಸಿಸಿಟಿವಿಯಲ್ಲಿ ಸೆರೆಯಾಗಿರುವ ಆರೋಪಿಯ ಸುಳಿವು ಕಂಡು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಾಬು ಜಾನ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.