Kannada NewsKarnataka NewsNationalPolitics

*ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ: 7 ಅಭಿಮಾನಿಗಳ ಸಾವು*

ಪ್ರಗತಿವಾಹಿನಿ ಸುದ್ದಿ : ಆರ್‌ಸಿಬಿ ವಿಜಯೋತ್ಸವದಲ್ಲಿ ಪಾಲ್ಗೊಳ್ಳಲು ಚಿನ್ನಸ್ವಾಮಿ ಸ್ಟೇಡಿಯಂನತ್ತ ಅಭಿಮಾನಿಗಳು ಎಷ್ಟೊಂದು ಪ್ರಮಾಣದಲ್ಲಿ ಬಂದರು ಎಂದರೆ, ಭೀಕರ ಕಾಲ್ತುಳಿತವೇ ಸಂಭವಿಸಿದೆ.ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿದೆ.

ಇನ್ನೂ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಅಸ್ವಸ್ಥಗೊಂಡ ಇಬ್ಬರಿಗೂ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Home add -Advt

ಆರ್‌ಸಿಬಿ ಆಟಗಾಗರನ್ನು ನೋಡಲು ಬಂದಿದ್ದ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ವಿಧಾನಸೌಧದ ಮುಂದೆ ಜಮಾಯಿಸಿದ್ದಾರೆ. ಇನ್ನೂ ಇದೇ ವೇಳೆ ಅಭಿಮಾನಿಗಳೆಲ್ಲಾ ಚಿನ್ನಸ್ವಾಮಿ ಸ್ಟೇಡಿಯಂ ಏಕಾಏಕಿ ಬಂದಿದ್ದಾರೆ. ಇದೇ ಕಾರಣಕ್ಕೆ ನೂಕು ನುಗ್ಗಲು ಉಂಟಾಗಿ ಹಲವರು ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಬೌರಿಂಗ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಏಳು ಮಂದಿ ಅಭಿಮಾನಿಗಳು ಜೀವಬಿಟ್ಟಿದ್ದಾರೆ.

50ಕ್ಕೂ ಹೆಚ್ಚು ಅಭಿಮಾನಿಗಳಿಗೆ ಗಾಯಗಳಾಗಿದ್ದು, ಆ ಕೂಡಲೇ ಅವರನ್ನೆಲ್ಲಾ ಬೌರಿಂಗ್ ಆಸ್ಪತ್ರೆಗೆ ಆಂಬುಲೆನ್ಸ್‌ ಮೂಲಕ ಶಿಫ್ಟ್ ಮಾಡಲಾಗಿದೆ. ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಅಸ್ವಸ್ಥರನ್ನ ಆಸ್ಪತ್ರೆಗೆ ಕರೆದೊಯ್ಯಲೂ ಕೂಡ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

Related Articles

Back to top button