Karnataka News

*ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಚಾತುರ್ಯ ನಡೆದಿದ್ದು, ಭೀಕರ ಕಾಲ್ತುಳಿತ ಘಟನೆಯಲ್ಲಿ 10 ಜನರು ಬಲಿಯಾಗಿದ್ದಾರೆ.

18 ವರ್ಷಗಳ ಬಳಿಕ ಆರ್ ಸಿಬಿ ಐಪಿಎಲ್ ಟ್ರೋಫಿ ಮುಡಿಗೇರ‍ಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಸಂಜೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ ಸಿಬಿ ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆರ್ ಸಿಬಿ ಆಟಗಾರ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಅಭಿಮಾನಿಗಳ ಜನ ಸಾಗರವೇ ಸ್ಟೇಡಿಯಂಗೆ ಹರಿದುಬಂದಿದೆ. ಲಾಠಿಪ್ರಹಾರ ಮಾಡಿದರೂ ಜನರನ್ನು ನಿಯಂತ್ರಿಸಲು ಪೊಲೀಸರಿಗೆ ಕಷ್ಟಸಾಧ್ಯವಾಗಿದೆ.

Home add -Advt

ಸ್ಟೇಡಿಯಂ ಗೇಟ್ ಗಳನ್ನು ಮುರಿದು ಪ್ರವಾಹೋಪಾದಿಯಲ್ಲಿ ಅಭಿಮಾನಿಗಳು ಸ್ಟೇಡಿಯಂಗೆ ನುಗ್ಗಿದ್ದಾರೆ. ಈ ವೇಳೆ ಭಾರಿ ಕಾಲ್ತುಳಿತ ಸಂಭವಿಸಿದೆ. ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Back to top button