Karnataka News

*ಇಂದಿನಿಂದ ರಾಜ್ಯದಲ್ಲಿ ಚುರುಕಾಗಲಿದೆ ಮಳೆ: ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ಮುಂಗಾರು ಮಳೆಯ ಆರಂಭದಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ಮಳೆರಾಯ ಕಳೆದ ಮೂರ್ನಾಲ್ಕು ದಿನಗಳಿಂದ ಕೊಂಚ ತಣ್ಣಗಾಗಿದ್ದ. ಇಂದಿನಿಂದ ರಾಜ್ಯದಲ್ಲಿ ಮತ್ತೆ ಮಳೆ ಚುರುಕಾಗಲಿದ್ದು, 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿದಂತೆ ರಾಜ್ಯಾದ್ಯಂತ ಮಳೆ ಚುರುಕಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

Home add -Advt

ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related Articles

Back to top button