Politics

*ನಮ್ಮಿಂದ ಲೋಪವಾಗಿದ್ದು ನಿಜ: ತಪ್ಪೊಪ್ಪಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ*

ಪ್ರಗತಿವಾಹಿನಿ ಸುದ್ದಿ: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿರುವ ಘಟನೆ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಪ್ರಕರಣದ ಹೊಣೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆ. ನಮ್ಮಿಂದ ಲೋಪವಾಗಿದ್ದು ನಿಜ ಎಂದಿದ್ದಾರೆ.

ಈ ದುರಂತ ಸಂಭವಿಸಬಾರದಿತ್ತು, ನಡೆದುಹೋಗಿದೆ. ನಿರೀಕ್ಷೆಗೂ ಮೀರಿ ಅಭಿಮಾನಿಗಳು ಬಂದಿದ್ದಾರೆ. ಸರಿಯಾದ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಬಹುದಿತ್ತು. ನಮ್ಮ ಕಡೆಯಿಂದ ಲೋಪವಾಗಿದೆ ಎಂದು ಹೇಳಿದರು.

ಬಿಜೆಪಿಯವರು ಎಲ್ಲದಕ್ಕೂ ರಾಜಕೀಯ ಮಾಡೋದು ಸರಿಯಲ್ಲ, ನಿನ್ನೆಯ ಘಟನೆ ಬಗ್ಗೆ ಸಿಎಂ, ಡಿಸಿಎಂ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಬೇರೆ ಸರ್ಕಾರಗಳ ಹಾಗೆ ಅಥವಾ ಕೇಂದ್ರ ಸರ್ಕಾರದ ರೀತಿ ಜವಾಬ್ದಾರಿಯಿಂದ ನಾವು ನುಣುಚಿಕೊಳ್ಳಲ್ಲ ಎಂದು ಹೇಳಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button