Sports

*BREAKING: ವಿರಾಟ್ ಕೋಹ್ಲಿ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ ೧೧ ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲಾಗಿದೆ.

ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ನೈಜ ಹೋರಾಟಗಾರರ ವೇದಿಕೆಯ ಹೆಚ್.ಎಂ.ವೆಂಕಟೇಶ್ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲಾಗಿದೆ.

ಈಗಾಗಲೇ ಆರ್ ಸಿಬಿ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಅದೇ ಪ್ರತಿಯ ಹಿಂಭಾಗದಲ್ಲಿ ವಿರಾಟ್ ಕೊಹ್ಲಿ ವಿರುದ್ಧ ದೂರು ಸ್ವೀಕರಿಸುವುದಾಗಿ ಪೊಲೀಸರು ಹಿಂಬರಹ ಬರೆದಿದ್ದಾರೆ ಎಂದು ತಿಳಿದುಬಂದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button