Karnataka News

*ಅಣ್ಣನ ಮೇಲೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಮ್ಮ*

ಪ್ರಗತಿವಾಹಿನಿ ಸುದ್ದಿ: ಅಣ್ಣ-ತಮ್ಮನ ನಡುವಿನ ಜಗಳ ವಿಕೋಪಕ್ಕೆ ತಿರುಗಿದ್ದು, ಅಣ್ಣನ ಮೇಲೆಯೇ ತಮ್ಮ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೋಡಿಂಬಾಳ ಬಳಿಯ ಕೋರಿಯರ್ ಎಂಬಲ್ಲಿ ಈ ಘಟನೆ ನಡೆದಿದೆ. ನಿಂಗಪ್ಪ ಎಂಬಾತ ತನ್ನ ಅಣ್ಣ ಹನುಮಪ್ಪ ಮೇಲೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಹತ್ಯೆಗೆ ಯತ್ನಿಸಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಹುನುಮಪ್ಪನನ್ನು ಕಡಬ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಆರೋಪಿಯನ್ನು ಬಂಧಿಸಿದ್ದಾರೆ. ಅಣ್ಣ-ತಮ್ಮ ಇಬ್ಬರೂ ಗದಗ ಮೂಲದವರು. ಪುತ್ತೂರಿನಿಂದ ರೈಲಿನಲ್ಲಿ ಬಜಕೆರೆ ನಿಲ್ದಾಣಕ್ಕೆ ಬಂದು ಅಲ್ಲಿಂದ ನಡೆದು ಇಬ್ಬರೂ ಕೋರಿಯರ್ ಎಂಬ ಸ್ಥಳಕ್ಕೆ ಬಂದಿದ್ದರು. ಆರೋಪಿ ಪುತ್ತೂರಿನಲ್ಲಿ ಪೆಟ್ರೋಲ್ ಖರಿದಿಸಿದ್ದ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button