
ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಕೃಷ್ಣಾವರಂ ಬಳಿ ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಕೃಷ್ಣಾವರಂ ಗ್ರಾಮದ ಆಕಾಶ್ (33), ಜಾನ್ (30) ಎಂಬುವವರು ಮೃತಪಟ್ಟಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ.
ಅಪ್ಪು, ತಮಿಳರಸನ್, ನಾಗರಾಜು ಗಂಭೀರವಾಗಿ ಗಾಯಗೊಂಡು, ಬೆಮಲ್ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಮಲ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




