Karnataka News

*ಭಾರಿ ಮಳೆ ಎಚ್ಚರಿಕೆ: ಬೆಳಗಾವಿ ಸೇರಿದಂತೆ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ಜೂನ್ 13ರಿಂದ ವರುಣಾರ್ಭಟ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳುರು, ಶಿವಮೊಗ್ಗ, ಕೊಡಗು, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ವಿಜಯನಗರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಚಾಮರಾಜನಗರ, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Related Articles

Back to top button