Karnataka News

*ಸಮಾಜ ಕಲ್ಯಾಣ ಇಲಾಖೆ ಮಹಿಳಾ ಅಧಿಕಾರಿಗೆ ಚಾಕು ಇರಿತ: ಹತ್ಯೆಗೆ ಯತ್ನ*

ಪ್ರಗತಿವಾಹಿನಿ ಸುದ್ದಿ: ಸಮಾಜ ಕಲ್ಯಾಣ ಇಲಾಖೆ ಮಹಿಳಾ ಅಧಿಕಾರಿಯನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಚಾಕುವಿನಿಂದ ಇರಿದು ರೇಣುಕಾ ಸಾಯಬಣ್ಣ ಕನ್ನೊಳ್ಳಿ (30)ಎಂಬುವವರನ್ನು ಹತ್ಯೆಗೆ ಯತ್ನಿಸಿದ್ದಾರೆ.

ರೇಣುಕಾ ಕನ್ನೊಳ್ಳಿ ಇಂಡಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ. ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ರೇಣುಕಾ ಅವರಿಗೆ ಚಾಕು ಇರಿದಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button