Latest

*ಅರ್ಜಿ ಆಹ್ವಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2025-26 ನೇ ಸಾಲಿನ ಮೀನುಗಾರಿಕೆ ಇಲಾಖೆಯ ಜಿಲ್ಲಾ ಮತ್ತು ರಾಜ್ಯ ವಲಯ ಯೋಜನೆಗಳಿಗೆ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಅಹ್ವಾನಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಮೀನುಗಾರರಿಗೆ/ಮೀನುಕೃಷಿಕರಿಗೆ ಮೀನುಗಾರಿಕೆ ಇಲಾಖೆಯ ಯೋಜನೆಗಳಾದ ಜಿಲ್ಲಾ ವಲಯದಡಿ ಮೀನುಗಾರಿಕೆ ಸಲಕರಣೆ ಕಿಟ್ ವಿತರಣೆ (ಪ.ಜಾತಿ/ಪ.ಪಂಗಡ), ಮತ್ಸ್ಯ ವಾಹಿನಿ ಯೋಜನೆಯಡಿ ದ್ವಿಚಕ್ರ ವಾಹನ ಖರೀದಿಗೆ ಸಹಾಯಧನ (ಪ.ಜಾತಿ/ಪ.ಪಂಗಡ/ಸಾಮಾನ್ಯ ವರ್ಗ), ರಾಜ್ಯ ವಲಯದಡಿ ಮೀನುಗಾರಿಕೆ ಸಲಕರಣೆ ಕಿಟ್ ವಿತರಣೆ, ಮೀನುಮರಿ ಖರೀದಿಗೆ ಸಹಾಯಧನ, ಕೆರೆಯ ಅಂಚಿನಲ್ಲಿ ಮೀನುಮರಿ ಪಾಲನಾ ಕೊಳ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು.

Home add -Advt

ಆಸಕ್ತರು ಬೆಳಗಾವಿ/ಬೈಲಹೂಂಗಲ/ರಾಮದುರ್ಗ/ರಾಯಭಾಗ/ಖಾನಾಪೂರ/ಚಿಕ್ಕೋಡಿ ತಾಲೂಕಿನ ಮೀನುಗಾರರು ಮತ್ತು ಸಾರ್ವಜನಿಕರು ಜುಲೈ.15, 2025ರ ಒಳಗಾಗಿ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ದೂರವಾಣಿ ಸಂಖ್ಯೆ 8722581982 ಮತ್ತು 9739717994 ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button