ಜೂ.17ರ ವರೆಗೆ ಅಲರ್ಟ್ ಘೋಷಣೆ: ಯಾವ ಜಿಲ್ಲೆಯಲ್ಲಿ ಹೇಗಿರಲಿದೆ ಮಳೆ ಅಬ್ಬರ..?

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಜೂ17 ರ ವರೆಗೆ ಎಲ್ಲಡೆ ಭಾರಿ ಮಳೆ ಆಗಲಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕೆಲ ಕಡೆ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಗಾದ್ರೆ ಯಾವ ಜಿಲ್ಲೆಯಲ್ಲಿ ಹೇಗಿರಲಿದೆ ಮಳೆ?
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾವೇರಿ, ದಾವಣಗೆರೆ ಜಿಲ್ಲೆಗಳಿಗೆ ಇಂದು ಭಾರೀ ಮಳೆ ಎಂದು ಹವಾಮಾನ ಇಲಾಖೆ ಬೆಳಗ್ಗೆ ಅಲರ್ಟ್ ನೀಡಿದೆ.
ಅಲ್ಲದೆ ರಾಯಚೂರು, ಬಳ್ಳಾರಿ, ವಿಜಯನಗರ, ಯಾದಗಿರಿ ಜಿಲ್ಲೆಗಳಿಗೂ ಇಂದು ಮಳೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದು ಮುಂಗಾರು ಆರ್ಭಟಿಸುತ್ತಿದೆ.
ಜೂನ್ 12ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಹಾಗೂ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಮತ್ತು ವಿಜಯನಗರ, ತುಮಕೂರು, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಬಳ್ಳಾರಿ, ರಾಯಚೂರು, ಧಾರವಾಡ ಜಿಲ್ಲೆಗಳಿಗೆ ಯೆಲ್ಲೊಅಲರ್ಟ್ ಹವಾಮಾನ ಇಲಾಖೆಯಿಂದ ಘೋಷಿಸಲಾಗಿದೆ.
ಜೂನ್ 13ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗೆ ರೆಡ್ ಹಾಗೂ ಕೋಲಾರ, ಚಿತ್ರದುರ್ಗ, ಯಾದಗಿರಿ, ಬೀದರ್, ಚಾಮರಾಜನಗರ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಜೂನ್ 14 ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಹಾಗೂ ದಕ್ಷಿಣ ಒಳನಾಡಿನ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಉಳಿದಂತೆ ಬಾಗಲಕೋಟೆ, ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಹಾಗೂ ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಗದಗ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ರಾಜ್ಯದ ಕೆಲವೆಡೆ ಬುಧವಾರ ಸಾಧಾರಣ ಮಳೆಯಾಗಿದೆ
ಧಾರವಾಡ ಜಿಲ್ಲೆಗೆ ರೆಡ್ ಅಲರ್ಟ್: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಧಾರವಾಡ ಜಿಲ್ಲೆಗೆ ರೆಡ್ ಅಲರ್ಟ್ ಇರುವದರಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಧಾರವಾಡ ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಿನ್ನೆ ಸಂಜೆಯಿಂದ ನಿರಂತರವಾಗಿ ಮತ್ತು ವ್ಯಾಪಕವಾಗಿ ಮಳೆ ಆಗುತ್ತಿರುವದರಿಂದ ಶಾಲಾ ಕಾಲೇಜು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ಇಂದು ಜೂ.12 ರಂದು ಒಂದು ದಿನದ ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ.
ಇನ್ನು ಈಗಾಗಲೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.