Kannada NewsKarnataka NewsNationalPolitics
*ಗುಜರಾತ್ ವಿಮಾನ ದುರಂತ: ಪ್ರಯಾಣಿಕರ ಸುರಕ್ಷತೆ ಬಗ್ಗೆ ಪ್ರಾರ್ಥಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಗುಜರಾತ್ ನ ಅಹಮದಾಬಾದ್ನಲ್ಲಿ ಏರ್ ಇಂಡಿಯಾದ ಸಂಸ್ಥೆಯ AI-171 ಪ್ರಯಾಣಿಕ ವಿಮಾನ ಪತನವಾಗಿದೆ. ಈ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ ರೂಪಾನಿ ಸೇರಿದಂತೆ 242 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಪ್ರಯಾಣಿಕರ ಸುರಕ್ಷತೆಗಾಗಿ ಸಿಎಂ ಸಿದ್ದರಾಮಯ್ಯ ಪ್ರಾರ್ಥನೆ ಮಾಡಿದ್ದಾರೆ.
ಈ ದುರಂತದ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, . ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತ್ನ ಅಹ್ಮದಾಬಾದ್ ನಗರದಲ್ಲಿ ಅಪಘಾತಕ್ಕೀಡಾದ ಸುದ್ದಿ ತಿಳಿದು ಆಘಾತವಾಗಿದೆ.
ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಗಳಿಗೆ. ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ, ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ ಎಂದು ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.