Karnataka NewsLatestPolitics

*ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿಯ ರಾಜ್ಯಾಧ್ಯಕ್ಷರ ಪತ್ನಿ ನಿಧನ*

ಪ್ರಗತಿವಾಹಿನಿ ಸುದ್ದಿ : ರಾಜ್ಯ ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿಯ ರಾಜ್ಯಾಧ್ಯಕ್ಷರಾದ ಹೆಚ್.ಎಂ ರೇವಣ್ಣ ಅವರ ಪತ್ನಿ ವತ್ಸಲ ಅವರು ನಿನ್ನೆ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇತ್ತೀಚೆಗೆ ಉತ್ತರ ಭಾರತಕ್ಕೆ ಪ್ರವಾಸಕ್ಕೆ ಹೋಗಿದ್ದ ವೇಳೆ ವತ್ಸಲ ಅವರಿಗೆ ಕೈಗೆ ಗಾಯವಾಗಿತ್ತು. ಈ ಹಿನ್ನಲೆ ತಮ್ಮ ತೋಟದ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ನಿನ್ನೆ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು ಕೂಡಲೇ ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಂಜೆ ಕೊನೆಯುಸಿರೆಳೆದಿದ್ದಾರೆ. ಮೃತ ವತ್ಸಲ ಅವರು ಪತಿ ಹೆಚ್.ಎಂ ರೇವಣ್ಣ ಹಾಗೂ ಇಬ್ಬರು ಮಕ್ಕಳಾದ ಶಶಾಂಕ್ ಹಾಗೂ ಅನೂಪ್ ಅವರನ್ನು ಅಗಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button