LatestNationalPolitics

*ವಿಮಾನ ದುರಂತ ಪ್ರಕರಣ: ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ಅಹಮದಾಬಾದ್ ಏರ್ ಪೋರ್ಟ್ ಬಳಿ ಏರ್ ಇಂಡಿಯಾ ವಿಮಾನ ಪತನಗೊಂಡು 261 ಜನರು ಸಾವನ್ನಪ್ಪಿರುವ ಘಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್ ಗೆ ಭೇಟಿ ನೀಡಿದ್ದಾರೆ.

ಗುಜರಾತ್ ನ ಅಹಮದಾಬಾದ್ ನಲ್ಲಿ ನಿನ್ನೆ ಮಧ್ಯಾಹ್ನ AI-171 ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡು ಹೊತ್ತಿ ಉರಿದಿತ್ತು. ಘಟನೆಯಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸೇರಿದಂತೆ 261 ಜನರು ಮೃತಪಟ್ಟಿದ್ದರು.

ಪ್ರಧಾನಿ ನರೇಂದ್ರ ಮೋದಿ ಇಂದು ವಿಮಾನ ದುರಂತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಗಾಯಾಳುಗಳು ದಾಖಲಾಗಿರುವ ಅಹಮದಾಬಾದ್ ನ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ವೈದ್ಯರಿಂದ ಮಾಹಿತಿ ಪಡೆದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button