Belagavi NewsBelgaum NewsKannada NewsKarnataka News
*ಬೆಳಗಾವಿಯಲ್ಲಿ ಮತ್ತೊಂದು ದುರಂತ: ಮನೆ ಗೋಡೆ ಕುಸಿದು ಮಹಿಳೆ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಸಾಲು ಸಾಲು ಅವಾಂತರಳು ಸೃಷ್ಟಿಯಾಗಿವೆ. ಬೆಳಗಾವಿ ಜಿಲ್ಲೆಯಲ್ಲಿಯೂ ಮಳೆ ಅಬ್ಬರ ಜೋರಾಗಿದೆ. ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆಗೆ ಮನೆಗೋಡೆ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ, ಅವಶೇಷಗಳಡಿ ಸಿಲುಕಿದ್ದ ಮಹಿಳೆ ಮೃತಪಟ್ಟಿದ್ದಾರೆ. ಮಣ್ಣಿನ ಅಡಿಯಲ್ಲಿ ಸಿಲುಕಿದ್ದ ಮಹಿಳೆಯನ್ನು ಹೊರತೆಗೆದು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಬದುಕುಳಿಯಲಿಲ್ಲ. ಫಕೀರವ್ವ ಲಕ್ಷ್ಮಣ ಹಾವೇರಿ (65) ಮೃತ ಮಹಿಳೆ ಎಂದು ತಿಳಿದುಬಂದಿದೆ.