
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಆರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನಾಳೆಯಿಂದ ಮಳೆ ಅಬ್ಬರ ಮತ್ತಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜೂನ್ 14 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಹಾವೇರಿ, ಧಾರವಾಡ, ಹಾಸನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಜೂನ್ 17 ರವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.