Kannada NewsKarnataka NewsLatest

*ಮಂಗಳೂರು-ಮೂಡಬಿದ್ರೆ-ಕಾರ್ಕಳ ಹೆದ್ದಾರಿಯಲ್ಲಿ ಗುಡ್ಡ ಕುಸಿತ: ಸಂಚಾರ ನಿಷೇಧ*

ಪ್ರಗತಿವಾಹಿನಿ ಸುದ್ದಿ: ಕಳೆದ ವರ್ಷ ಸುರಿದ ಭಾರಿ ಮಳೆಗೆ ಉತ್ತರ ಕನ್ನಡ ಜಿಲ್ಲೆಯ ಶಿರೂರು ಗುಡ್ಡ ಕುಸಿದು ಭಾರಿ ಅವಾಂತರ ಸೃಷ್ಟಿಯಾಗಿತ್ತು. ಈ ವರ್ಷ ಮತ್ತೆ ಮಳೆ ಆರಂಭವಾಗಿದ್ದು, ದಕ್ಷಿಣ ಕನ್ನಡದಲ್ಲೂ ಗುಡ್ಡ ಕುಸಿತವಾಗಿದೆ. 

ದಕ್ಷಿಣ ಕನ್ನಡದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ವಾಮಂಜೂರು ಸಮೀಪದ ಕತ್ತಿಕಲ್ ನ ಮಂಗಳೂರು-ಮೂಡಬಿದ್ರೆ- ಕಾರ್ಕಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169 ಯಲ್ಲಿ ಗುಡ್ಡ ಕುಸಿತ ಉಂಟಾಗಿದೆ.

Home add -Advt

ವಾಮಂಜೂರಿನಿಂದ ಗುರುಪುರದ ಕಡೆಗೆ ತೆರಳುವ ರಸ್ತೆಯ ಒಂದು ಭಾಗದಲ್ಲಿ ಗುಡ್ಡ ಕುಸಿದಿದ್ದು ಮುನ್ನೆಚ್ಚರಿಕ ಕ್ರಮವಾಗಿ ರಸ್ತೆಯ ಒಂದು ಭಾಗದಲ್ಲಿ ಸಂಚಾರ ನಿಷೇಧಿಸಲಾಗಿದೆ. ಇನ್ನು ಗುಡ್ಡ ಕುಸಿಯದಂತೆ ಸಾಯಿಲ್ ನೈಲಿಂಗ್ ಮಾಡಿದ್ದರೂ ಕೂಡ ಕುಸಿದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಇನ್ನು ಗುಡ್ಡ ಕುಸಿದಿರುವ ಜಾಗದಲ್ಲಿ ಮತ್ತಷ್ಟು ಮಣ್ಣು ಹಗುರವಾಗಿದ್ದು, ಮರಗಳ ಜೊತೆಗೆ ಮತ್ತೆ ಕುಸಿಯುವ ಸಾಧ್ಯತೆ ಇದೆ. ಈ ಹಿನ್ನಲೆ ಮುನ್ನೆಚ್ಚರಿಕ ಕ್ರಮವಾಗಿ ರಸ್ತೆಯ ಒಂದು ಭಾಗದಲ್ಲಿ ಸಂಚಾರ ನಿಷೇಧಿಸಲಾಗಿದೆ.

Related Articles

Back to top button