Belagavi NewsBelgaum NewsKarnataka News

*ಮಳೆ ಅಬ್ಬರಕ್ಕೆ ಕೊಚ್ಚಿ ಹೋದ ತಾತ್ಕಾಲಿಕ ಸೇತುವೆ: ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿವೆ. ತಾತ್ಕಾಲಿಕ ಸೇತುವೆ ನೀರಿನಲ್ಲಿ ಕೊಚ್ಚಿ ಹೋದ ಪರಿಣಾಮ ಬೆಳಗಾವಿ-ಗೋವಾ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ.

ಕುಸಮಳಿ ಗ್ರಾಮದ ಬಳಿ ಮಲಪ್ರಭಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡುತ್ತಿರುವ ಹಿನ್ನೆಲೆಯಲ್ಲಿ ಸೇತುವೆ ಪಕ್ಕದಲ್ಲಿ ವಾಹನಗಳ ಸಂಚಾರಕ್ಕೆ ತಾತ್ಕಲೈಕ ರಸ್ತೆ ನಿರ್ಮಾಣ ಮಾಡಲಾಗಿತ್ತು. ಆದರೆ ಧಾರಾಕಾರ ಮಳೆಯಿಂದಾಗಿ ಈ ರಸ್ತೆ ನೀರಿನಲ್ಲಿ ಕೊಚ್ಚಿ ಹೋಗಿದೆ.

ಮಲಪ್ರಭಾ ನದಿಯ ಒಳ ಹರಿವು ಹೆಚ್ಚಾದ ಪರುಣಾಮ ರಸ್ತೆ ಕೊಚ್ಚಿ ಹೋಗಿದೆ. ಪ್ರಯಾಣಿಕರು ಬೇರೆ ಮಾರ್ಗದ ಮೂಲಕ ಗೋವಾಕ್ಕೆ ತೆರಳಲು ಸೂಚಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button