Karnataka NewsLatest

*ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: ಮೂರು ಖಾಸಗಿ ಶಾಲೆಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದ ವಿದ್ಯಾಸೌಧ ಪಬ್ಲಿಕ್ ಸ್ಕೂಲ್, ಕಿಡ್ಸ್ ಸ್ಕೂಲ್ ಸೇರಿದಂತೆ ಜಿಲ್ಲೆಯ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ವಿಷಯ ತಿಳಿಯುತ್ತಿದಂತೆ ಪೊಲೀಸರು, ಬಾಂಬ್ ಪತ್ತೆದಳ, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿವೆ.

Home add -Advt

ಹಲವು ದಿನಗಳ ಹಿಂದೆ ಬೆಂಗಳೂರಿನ ವಿವಿಧ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಇದೀಗ ಹಾಸನ ಜಿಲ್ಲೆಯ ಶಾಲೆಗಳಿಗೂ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ.

Related Articles

Back to top button