Karnataka NewsLatestPolitics

*ಸಚಿವ ಪ್ರಿಯಾಕ್ ಖರ್ಗೆ ವಿದೇಶ ಪ್ರವಾಸಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿದೇಶ ಪ್ರವಾಸಕ್ಕೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ. ‘ಬಯೋ-2025’ ಸಮಾವೇಶದಲ್ಲಿ ಭಾಗವಹಿಸಲು ಬಾಸ್ಟನ್ ಗೆ ತೆರಳಬೇಕಾಗಿದ್ದ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿದೆ.

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ಯಾರಿಸ್‌ನಲ್ಲಿರುವ ಪ್ರಿಯಾಂಕ್‌ ಖರ್ಗೆ ಅವರು ಜೂ.16 ರಿಂದ 19ರವರೆಗೆ ಬಾಸ್ಟನ್‌ನಲ್ಲಿ ನಡೆಯುತ್ತಿದ್ದ ಬಯೋ-2025 ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಿತ್ತು. ರಾಜ್ಯ ಐಟಿ-ಬಿಟಿ ಇಲಾಖೆಯ ಅಧಿಕಾರಿಗಳು ಈಗಾಗಲೇ ಬಾಸ್ಟನ್‌ ಸೇರಿಕೊಂಡಿದ್ದರು. ಆದರೆ ಪ್ರಿಯಾಂಕ್‌ ಖರ್ಗೆ ಅವರಿಗೆ ಬಾಸ್ಟನ್‌ಗೆ ತೆರಳಲು ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿದೆ ಎಂದು ತಿಳಿದುಬಂದಿದೆ.

Home add -Advt

ಈ ಬಗ್ಗೆ ಎಕ್ಸ್‌ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್‌ ಖರ್ಗೆ, ಅನುಮತಿ ನಿರಾಕರಣೆ ಬಗ್ಗೆ ಸದ್ಯಕ್ಕೆ ಯಾವುದೇ ಬಹಿರಂಗ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ. ನಾನು ಬೆಂಗಳೂರಿಗೆ ಹಿಂತಿರುಗಿದ ನಂತರ, ಅನುಮತಿ ನಿರಾಕರಣೆಯ ಕುರಿತು ಕೇಂದ್ರ ಸರ್ಕಾರದಿಂದ ಸ್ಪಷ್ಟ ವಿವರಣೆ ಪಡೆದು ಬಳಿಕ ಮಾತನಾಡುತ್ತೇನೆ ಎಂದಿದ್ದಾರೆ.

Related Articles

Back to top button