Kannada NewsKarnataka NewsLatest

ವೀರಶೈವ ಎಂದ ಯಡಿಯೂರಪ್ಪಗೂ ಕಂಟಕ, ಜೋಳಿಗೆ ಹಾಕಿದ ಪೂಜಾರಿಗೂ ಸಂಕಟ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಉಪ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಜಿಲ್ಲೆಯ ಮೂರು ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟು ಐದು ದೂರುಗಳು ದಾಖಲಾಗಿವೆ.
ಕಾಗವಾಡ ತಾಲ್ಲೂಕಿನ ಶಿರಗುಪ್ಪಿಯಲ್ಲಿ ಹಾಗೂ ಗೋಕಾಕನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ‘ವೀರಶೈವ’ ಸಮಾಜದ ಹೆಸರು ಬಳಕೆ ಮಾಡಿ ಮತಯಾಚಿಸಿರುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ದೂರು ದಾಖಲಿಸಲಾಗಿದೆ.
ಅದೇ ರೀತಿ ಗೋಕಾಕ ಮತಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿರುವ ಅಶೋಕ ಪೂಜಾರಿ ಅವರು ಖಾವಿ ಬಟ್ಟೆ ಧರಿಸಿ ವೀರಶೈವ ಲಿಂಗಾಯತ ಸಮಾಜದ ಸಂಕೇತವಾಗಿರುವ ಜೋಳಿಗೆಯನ್ನು ಹಾಕಿಕೊಂಡು ಸಮಾಜದ ಜನರಿಂದ ಹಣ ಮತ್ತು ಮತಗಳನ್ನು ಯಾಚನೆ ಮಾಡಿರುವುದರ ವಿರುದ್ಧ ಕೂಡ ದೂರು ದಾಖಲಾಗಿರುತ್ತದೆ.
ಅಥಣಿಯ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿರುವ ಮಹೇಶ್ ಕುಮಠಳ್ಳಿ ಅವರ ನಿವಾಸದಲ್ಲಿ ಕಾರ್ಯಕರ್ತರಿಗೆ ಹಣ ಹಂಚಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿಯನ್ನು ಆಧರಿಸಿ ಪ್ರತ್ಯೇಕ ಪ್ರಕರಣವನ್ನು ಕೂಡ ದಾಖಲಿಸಲಾಗಿದೆ.
ಕಾಗವಾಡ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಅವರು ಅನುಮತಿ ಪಡೆಯದೇ ಖಿಳೇಗಾಂವದಲ್ಲಿ ಚುನಾವಣಾ ಪ್ರಚಾರ ನಡೆಸಿರುವುದಕ್ಕೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ದೂರು ದಾಖಲುಗೊಂಡಿರುತ್ತದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button