Belagavi NewsBelgaum NewsKarnataka NewsPolitics

*ನಮ್ಮ ಸರ್ಕಾರ ಇದ್ದಾಗಲೇ ಬೆಳಗಾವಿ ಜಿಲ್ಲಾ ವಿಭಜನೆ ಆಗ್ಬೇಕು: ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ಸದ್ಯ ಸಿಎಂ ಬದಲಾವಣೆ ಆಗ್ತಾರೆ, ಕೆಪಿಸಿಸಿ ಅಧ್ಯಕ್ಷರು ಬದಲಾಗ್ತಾರೆ ಎಂಬ ಚರ್ಚೆ ನಡೆಯುತ್ತಿದೆ. ಆದರೆ ಇದೆಲ್ಲವೂ ಕೇಂದ್ರ ನಾಯಕರಿಗೆ ಬಿಟ್ಟಿದ್ದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. 

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಕೆಪಿಸಿಸಿ ರಾಜ್ಯಾಧ್ಯಕ್ಷ ಸ್ಥಾನ ಯಾರಿಗೆ ಮತ್ತು ಯಾವಾಗ ಕೊಡುತ್ತಾರೆ ಎಂಬುದು ಹೈಕಮಾಂಡ್‌’ ನೋಡಿಕೊಳ್ಳುವ ವಿಚಾರ. ನಾವು ಆಕಾಂಕ್ಷಿಗಳಾದರು ಜವಾಬ್ದಾರಿ ನೀಡುವುದು ಬಿಡುವುದು ಹೈಕಮಾಂಡಗೆ ಬಿಟ್ಟದ್ದು. ಯಾರ ಮೇಲೂ ಈ ಕುರಿತು ಒತ್ತಡ ಹಾಕಿಲ್ಲ. ಆದರೆ, ನಮ್ಮ ಸರ್ಕಾರದ ಅವಧಿಯಲ್ಲೇ ಜಿಲ್ಲಾ ವಿಭಜನೆ ಮಾಡುವ ಆಸೆಯಿದೆ. ಬೆಳಗಾವಿ ಜಿಲ್ಲಾ ವಿಭಜನೆ ಆಗಬಹುದು. ಆದರೇ ತಕ್ಷಣ ಆಗಲ್ಲ. ಇದೇ ಸರ್ಕಾರದಲ್ಲಿ ಮಾಡುವ ಆಸೆಯಿದೆ ಎಂದರು.

ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಸಿಎಂ-ಡಿಸಿಎಂ ನಡುವೆ ಯಾವುದೇ ಅಸಮಾಧಾನವಿಲ್ಲ. ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಅಧಿಕಾರ ಸರ್ಕಾರಕ್ಕಿದೆ. ಆದರೇ ಇದನ್ನು ಯಾರು ದುರ್ಬಳಕೆ ಮಾಡಿಕೊಳ್ಳುತ್ತಿಲ್ಲ ಎಂದರು.

Home add -Advt

Related Articles

Back to top button