
ಪ್ರಗತಿವಾಹಿನಿ ಸುದ್ದಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಚಿವ ಹೆಚ್.ಕೆ.ಪಾಟಿಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 7 ಪುಟಗಳ ಪತ್ರ ಬರೆದಿದ್ದಾರೆ.
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವಂತೆ ಪತ್ರದ ಮೂಲಕ ಆಗ್ರಹಿಸಿದ್ದಾರೆ. ರಾಜಕಾರಣಿಗಳು, ಅಧಿಕಾರಿಗಳ ಅಕ್ರಮದಿಂದಾಗಿ ಹಿಂದೆ ಸಂಪತ್ತು ಲೂಟಿಯಾಗಿ 1.50 ಲಕ್ಷ ಕೋಟಿ ಸರ್ಕಾರಕ್ಕೆ ನಷ್ಟವಾದ ಬಗ್ಗೆ ಪತ್ರದಲ್ಲಿ ಸಚಿವರು ಉಲ್ಲೇಖಿಸಿದ್ದಾರೆ.
ಅಕ್ರಮ ಗಣಿಗಾರಿಕೆಯ ಶೇ.7ರಷ್ಟು ಪ್ರಕರಣಗಳು ಮಾತ್ರ ತನಿಖೆಗೆ ಒಳಪಟ್ಟಿದ್ದು, ಶೇ.92ರಷ್ಟು ಪ್ರಕರಣಗಳು ತನಿಖೆಗೆ ಒಳಪಟ್ಟಿಲ್ಲ. ಈನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಪತ್ರದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.




