Kannada NewsLatestNational
*ದೆಹಲಿಗೆ ವಾಪಸ್ ಆದ ಏರ್ ಇಂಡಿಯಾ ವಿಮಾನ*

ಪ್ರಗತಿವಾಹಿನಿ ಸುದ್ದಿ: ಏರ್ ಇಂಡಿಯಾದ ಮತ್ತೊಂದು ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಮತ್ತೆ ದೆಹಲಿಗೆ ವಾಪಸ್ ಆಗಿರುವ ಘಟನೆ ನಡೆದಿದೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ದೆಹಲಿಯಿಂದ ಜಮ್ಮುವಿಗೆ ಹೊರಟಿತ್ತು. ಆದರೆ ಟೇಕಾಪ್ ಆದ ಕೆಲವೇ ನಿಮಿಷಗಳಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಮತ್ತೆ ದೆಹಲಿ ವಿಮಾನ ನಿಲ್ದಾಣಕ್ಕೆ ವಾಪಸ್ ಆಗಿದೆ.
ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದ್ದು, ಬಳಿಕ ಪ್ರಯಾಣಿಕರಿಗೆ ಪರ್ಯಾಯ ವಿಮಾನ ವ್ಯವಸ್ಥೆ ಮಾಡಲಾಯಿತು. ಭಾನುವಾರ ತಿರುವನಂತಪುರಂ ನಿಂದ ದೆಹಲಿಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿಯಾದ ಪರಿಣಾಮ ವಿಮಾನ ರದ್ದುಗೊಳಿಸಿದ್ದ ಘಟನೆ ನಡೆದಿತ್ತು.




