Kannada NewsKarnataka NewsNationalPolitics

*ಇಸ್ರೇಲ್-ಇರಾನ್ ನಡುವೆ ಯುದ್ಧಕ್ಕೆ ಕದನ ವಿರಾಮ: ಟ್ರಂಪ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕಳೆದ 12 ದಿನಗಳಿಂದ ನಡೆಯುತ್ತಿರುವ ಇಸ್ರೇಲ್ ಮತ್ತು ಇರಾನ್ ನಡುವಿಮ ಯುದ್ಧಕ್ಕೆ ಸಂಪೂರ್ಣ ಕದನ ವಿರಾಮ ಒಪ್ಪಂದವಾಗಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. 

ಈ ಬಗ್ಗೆ ಟ್ರಂಪ್ ಸೋಶಿಯಲ್ ಮೀಡಿಯಾ ದಲ್ಲಿ ಈ ಮಾಹಿತಿ ನೀಡಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಮೂಡಿದ್ದ ಆತಂಕ ಕೊನೆಯಾಗಿದೆ. ಟ್ರಂಪ್ ಈ ಹೇಳಿಕೆಯಿಂದ ಮಧ್ಯ ಪ್ರಾಚ್ಯ ರಾಷ್ಟ್ರದಲ್ಲಿ ನೆಮ್ಮದಿಯ ವಾತಾವರಣ ನಿರ್ಮಾಣವಾಗುವ ಮುನ್ಸೂಚನೆ ದೊರೆತಿದೆ.

ಎಲ್ಲರಿಗೂ ಅಭಿನಂದನೆಗಳು.. ಇಸ್ರೇಲ್ ಮತ್ತು ಇರಾನ್ ಸಂಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಇಸ್ರೇಲ್ ಮತ್ತು ಇರಾನ್ ತಮ್ಮ ಅಂತಿಮ ಕಾರ್ಯಾಚರಣೆಗಳನ್ನು ಮುಗಿಸಿದ ನಂತರ, ಸುಮಾರು 6 ಗಂಟೆಗಳಲ್ಲಿ ಕದನ ವಿರಾಮ ಪ್ರಾರಂಭವಾಗುತ್ತದೆ. 12 ಗಂಟೆಗಳ ಕಾಲ ಇದು ನಡೆಯುತ್ತದೆ. ನಂತರ ಯುದ್ಧವು ಮುಕ್ತಾಯವಾಗುತ್ತದೆ. ಇರಾನ್ ಮೊದಲು ಕದನ ವಿರಾಮವನ್ನು ಪ್ರಾರಂಭಿಸುತ್ತದೆ ಎಂದಿದ್ದಾರೆ.

24 ಗಂಟೆಗಳ ನಂತರ, 12 ದಿನಗಳ ಯುದ್ಧವು ಅಧಿಕೃತವಾಗಿ ಕೊನೆಗೊಳ್ಳುತ್ತದೆ. ಜಗತ್ತು ಇದನ್ನು ಸ್ವಾಗತಿಸುತ್ತದೆ. ಪ್ರತಿ ಕದನ ವಿರಾಮದ ಸಮಯದಲ್ಲಿ, ಎರಡೂ ಕಡೆಯವರು ಶಾಂತವಾಗಿ ಮತ್ತು ಗೌರವದಿಂದ ಇರುತ್ತಾರೆ.

Home add -Advt

ಅಲ್ಲದೆ, ಇಸ್ರೇಲ್ ಮತ್ತು ಇರಾನ್ ಎರಡೂ ದೇಶಗಳು ಈ ಯುದ್ಧವನ್ನು ಕೊನೆಗೊಳಿಸಲು ಧೈರ್ಯ ಮತ್ತು ಬುದ್ಧಿವಂತಿಕೆಯನ್ನು ತೋರಿಸಿವೆ. ಈ ಯುದ್ಧವು ವರ್ಷಗಳವರೆಗೆ ಮುಂದುವರಿಯಬಹುದಿತ್ತು‌.‌ ಇಡೀ ಮಧ್ಯಪ್ರಾಚ್ಯವನ್ನು ನಾಶಮಾಡಬಹುದಿತ್ತು. ಆದರೆ ಅದು ಆಗಲಿಲ್ಲ. ದೇವರು ಇಡೀ ಜಗತ್ತನ್ನು ಆಶೀರ್ವದಿಸಲಿ ಎಂದು ಟ್ರಂಪ್ ಬರೆದುಕೊಂಡಿದ್ದಾರೆ.

Related Articles

Back to top button