*ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ: CET ಸೀಟು ಹಂಚಿಕೆ ಪ್ರಕ್ರಿಯೆ ಕುರಿತು ಅರಿವು ಕಾರ್ಯಕ್ರಮ*

ಪ್ರಗತಿವಾಹಿನಿ ಸುದ್ದಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು (VTU) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಬೆಂಗಳೂರು ಇವರ ಸಹಯೋಗದಲ್ಲಿ ಸಿಇಟಿ 2025 (CET 2025) ಸೀಟು ಹಂಚಿಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರು ಮತ್ತು ಆಕಾಂಕ್ಷಿಗಳಿಗೆ “ಕಾಲೇಜು ಮತ್ತು ಕೋರ್ಸ್‌ಗಳ ಆಯ್ಕೆ” ಕುರಿತು ಮಹತ್ವದ ಅರಿವು ಕಾರ್ಯಕ್ರಮವನ್ನು ಆಯೋಜಿಸಿದೆ.
ಈ ಕಾರ್ಯಾಗಾರವು ಇದೆ ಶನಿವಾರ ಜೂನ್ 28, 2025 ರಂದು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 1:30 ರವರೆಗೆ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದೆ. ಸಿಇಟಿ ಮೂಲಕ ಇಂಜಿನಿಯರಿಂಗ್ ಅಥವಾ ಇತರ ವೃತ್ತಿಪರ ಕೋರ್ಸ್‌ಗಳಿಗೆ ಸೇರಲು ಬಯಸುವ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಈ ಕಾರ್ಯಕ್ರಮವು ಅತ್ಯಂತ ಉಪಯುಕ್ತವಾಗಲಿದೆ. ಕಾಲೇಜುಗಳ ಆಯ್ಕೆ, ವಿವಿಧ ಕೋರ್ಸ್‌ಗಳ ಭವಿಷ್ಯ, ಸೀಟು ಹಂಚಿಕೆ ಪ್ರಕ್ರಿಯೆ ಮತ್ತು ಅದಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿಗಳನ್ನು ಈ ಕಾರ್ಯಾಗಾರದಲ್ಲಿ ತಜ್ಞರು ವಿವರಿಸಲಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು, ಪೋಷಕರು ಮತ್ತು ಆಸಕ್ತ ಆಕಾಂಕ್ಷಿಗಳು ಭಾಗವಹಿಸಿ ಸದುಪಯೋಗವನ್ನು ಪಡೆಯಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ Chief Coordinator: Dr. M N Birje 9986066048.