Belagavi NewsBelgaum NewsKannada NewsKarnataka News
*ಮಳೆ ಅಬ್ಬರಕ್ಕೆ ಜನಜೀವನ ಹೈರಾಣು: ಇಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಹಲವು ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಮುನ್ನೆಚ್ಚರಿಕೆ ಕಾರ್ಯಕ್ರಮವಾಗಿ ಇವತ್ತು ವಿವಿಧ ಜಿಲ್ಲೆಗಳಲ್ಲಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ನೆರೆಯ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು ಬೆಳಗಾವಿ, ಖಾನಾಪುರ ತಾಲೂಕಿನಲ್ಲಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದ್ದೇಶಿಸಿದ್ದಾರೆ.
ಮತ್ತೊಂದೆಡೆ ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗ್ತಿದ್ದು ಪರಿಣಾಮವಾಗಿ ಹಳಿಯಾಳ, ದಾಂಡೇಲಿ, ಜೋಯಿಡಾ ಮತ್ತು ಯಲ್ಲಾಪುರ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಿ ಡಿಸಿ ಲಕ್ಷ್ಮೀಪ್ರಿಯಾ ಆದೇಶಿಸಿದ್ದಾರೆ.
ಹಾಗೆಯೇ, ಹಾಸನದ ಸಕಲೇಶಪುರ, ಆಲೂರು, ಅರಕಲಗೂಡು ಸೇರಿ 3 ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಡಿಸಿ ಲತಾಕುಮಾರಿ ಸೂಚನೆ ನೀಡಿದ್ದಾರೆ.