ಪ್ರಗತಿವಾಹಿನಿ ಸುದ್ದಿ, ಹುಕ್ಕೇರಿ : ರೈತರ ಬೆಳೆಗಳ ಸಾಗಣಿಗೆ ತೊಂದರೆಯಾಗದಂತೆ ಉತ್ತಮ ಗುಣಮಟ್ಟದ ರಸ್ತೆಗಳ ನಿರ್ಮಾಣಕ್ಕೆ ಒತ್ತು ನೀಡಲಾಗುತ್ತಿದೆ ಎಂದು ಎಂದು ಮಾಜಿ ಸಂಸದರೂ ಆದ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಹೇಳಿದರು.
ಅವರು ತಾಲೂಕಿನ ಗುರುವಾರ ಶಿರಗಾಂವ ಗ್ರಾಮದಲ್ಲಿ ಗುರುವಾರ ವಿವಿಧ ಅಭಿವೃದ್ದಿ ಕಾಮಗಾರಿಗಳ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ರಸ್ತೆ, ಚರಂಡಿ, ಬೀದಿ ದೀಪಗಳ ಅಳವಡಿಕೆ, ಕುಡಿಯುವ ನೀರು ಪೂರೈಕೆ, ಶೌಚಾಲಯ, ಅಗತ್ಯ ಬಸ್ ಸಂಚಾರ ಹಾಗೂ ಪ್ರಯಾಣಿಕರಿಗೆ ತಂಗುದಾಣ ನಿರ್ಮಾಣ, ಕೃಷಿ, ಕೈಗಾರಿಕೆ, ತೋಟಗಾರಿಕೆ, ಶಿಕ್ಷಣ ಕ್ಷೇತ್ರ, ಸಸಿಗಳ ನೆಡುವಿಕೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.
ಶಿರಗಾಂವ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸುಮಾರು ೧೫ ಲಕ್ಷ ರೂ ವೆಚ್ಚದಲ್ಲಿ ಕೈಗೆತ್ತಿಕೊಂಡ ರಂಗಮಂದಿರ ನಿರ್ಮಾಣ, ಮುಖ್ಯಮಂತ್ರಿಗಳ ಅನುದಾನದಡಿ ಸುಮಾರು ೯೦ ಲಕ್ಷ ರೂ ವೆಚ್ಚದ ಶಿರಗಾಂವ -ಗಜಬರವಾಡಿ ರಸ್ತೆ ಸುಧಾರಣೆ, ಸುಮಾರು ೫೦ ಲಕ್ಷ ರೂ ವೆಚ್ಚದ ಶಿರಗಾಂವ-ಕೊಟಬಾಗಿ ರಸ್ತೆ ಸುಧಾರಣೆ, ನೀರಾವರಿ ಇಲಾಖೆಯಿಂದ ೫೦ ಲಕ್ಷ ರೂ ವೆಚ್ಚದ ಶಿರಗಾಂವ -ಮದಿಹಳ್ಳಿ ಮುಖ್ಯ ರಸ್ತೆಯಿಂದ ಹನುಮಾನ ದೇವಸ್ಥಾನದವರೆಗಿನ ರಸ್ತೆ ಸುಧಾರಣೆ ಕಾಮಗಾರಿಗಳನ್ನು ಮಾಡಲಾಗುತ್ತಿದೆ.
ಜನ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಗುಣಮಟ್ಟದ ರಸ್ತೆಗಳ ನಿರ್ಮಾಣ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸಾಕಷ್ಟು ಶ್ರಮಿಸಲಾಗುತ್ತಿದೆ. ಕ್ಷೇತ್ರದ ಪ್ರತಿ ಹಳ್ಳಿ ಮತ್ತು ನಗರ ಪ್ರದೇಶಗಳ ಸಮಗ್ರ ಸುಧಾರಣೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಯಿಂದ ಅಗತ್ಯ ಅನುದಾನ ತಂದು ಅಭಿವೃದ್ಧಿಪಡಿಸಲಾಗುತ್ತಿದೆ.
ರಸ್ತೆ, ಚರಂಡಿ, ಬೀದಿ ದೀಪಗಳ ಅಳವಡಿಕೆ, ಕುಡಿಯುವ ನೀರು ಪೂರೈಕೆ, ಶೌಚಾಲಯ, ಅಗತ್ಯ ಬಸ್ ಸಂಚಾರ ಹಾಗೂ ಪ್ರಯಾಣಿಕರಿಗೆ ತಂಗುದಾಣ ನಿರ್ಮಾಣ, ಕೃಷಿ, ಕೈಗಾರಿಕೆ, ತೋಟಗಾರಿಕೆ, ಶಿಕ್ಷಣ ಕ್ಷೇತ್ರ, ಸಸಿಗಳ ನೆಡುವಿಕೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.
ಈ ಮೂಲಕ ಕ್ಷೇತ್ರವನ್ನು ಮಾದರಿಯನ್ನಾಗಿ ರೂಪಿಸುವತ್ತ ಮಹತ್ವದ ಹೆಜ್ಜೆ ಇರಿಸಲಾಗಿದೆ ರೈತರಿಗೆ ನಿಗದಿತ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿಯೊಂದಿಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಇಲಾಖೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ಗುತ್ತಿಗೆದಾರರಾದ ಮಲ್ಲಪ್ಪಾ ಬಿಸಿರೊಟ್ಟಿ, ಜಿಪಂ ಎಂಜನೀಯರಿಂಗ್ ಉಪವಿಭಾಗದ ಅಭಿಯಂತರ ಎಸ್.ಡಿ.ಕಾಂಬಳೆ, ತಾಪಂ ಸದಸ್ಯ ಬಾಳಪ್ಪಾ ಗಸ್ತಿ, ಮಾಜಿ ಅಧ್ಯಕ್ಷ ಸತ್ಯಪ್ಪಾ ನಾಯಿಕ, ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ ಬಸವರಾಜ ಮರಡಿ, ಮುಖಂಡರಾದ ಗೋಪಾಲ ಢಂಗ, ಪರಪ್ಪ ಶಿರಗಾಂವಕರ ಮತ್ತಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ