Kannada NewsKarnataka NewsPolitics

*ಸೂರಜ್ ರೇವಣ್ಣಗೆ ಎರಡನೇ ಕೇಸ್ ನಲ್ಲಿ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಎಂ ಎಲ್ ಸಿ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ.

ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಸಿಐಡಿ ಬಿ ರಿಪೋರ್ಟ್ ಸಲ್ಲಿಸಿದೆ. ಸಾಕ್ಷಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಸಿಐಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ. ಒಂದು ಕೇಸ್ ನಲ್ಲಿ ಈಗಾಗಲೇ ಸಿಐಡಿ ಸೂರಜ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿತ್ತು. ಇದೀಗ ಎರಡನೇ ಕೇಸ್ ನಲ್ಲಿ ಬಿ ರಿಪೋರ್ಟ್ ಸಲ್ಲಿಕೆ ಮಾಡಿದೆ.

Home add -Advt

ಸೂರಜ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ತನಿಖೆಗೆ ಸಿಐಡಿಗೆ ವರ್ಗಾವಣೆ ಮಾಡಿತ್ತು. ಸೂರಜ್ ನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಸಂತ್ರಸ್ತನ ವಿರುದ್ಧವೂ ಸೂರಜ್ ಪ್ರತಿ ದೂರು ದಾಖಲಿಸಿದ್ದರು. ಬಳಿಕ ಜಾಮೀನು ಮೇಲೆ ಬಿಡಿಗಡೆಯಾಗಿದ್ದರು. ಇದೀಗ ಎರಡನೇ ಪ್ರಕರಣದಲ್ಲಿ ಸೂರಜ್ ರೇವಣ್ಣ ವಿರುದ್ಧ ಸಿಐಡಿ ಬಿ ರಿಪೋರ್ಟ್ ಸಲ್ಲಿಸಿದೆ.


Related Articles

Back to top button