Karnataka NewsLatestPolitics

*ಗಾಳಿ ತಣ್ಣಗೆ ಬೀಸುತ್ತಿದೆ…. ಸೆಪ್ಟೆಂಬರ್ ನಲ್ಲಿ ಭಾರಿ ಬದಲಾವಣೆ: ಹೊಸ ಬಾಂಬ್ ಸಿಡಿಸಿದ ಸಚಿವ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕೀಯದಲ್ಲಿ ಕೆಲವೇ ತಿಂಗಳಲ್ಲಿ ಭಾರಿ ಬದಲಾವಣೆಯಾಗಲಿದೆ ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಭವಿಷ್ಯ ನುಡಿದಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಜಣ್ಣ, ಗಾಳಿ ತಣ್ಣಗೆ ಬೀಸುತ್ತಿದೆ. ಆಗಸ್ಟ್, ಸಪ್ಟೆಂಬರ್ ಬಳಿಕ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆಯಾಗಲಿದೆ. ಯಾವುದಕ್ಕೂ ಸೆಪ್ಟಂಬರ್ ಕಳಿಯಲಿ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.

Home add -Advt

ಇನ್ನು ಸಿಎಂ ಸಿದ್ದರಾಮಯ್ಯ 2013ರಲ್ಲಿ ಇದ್ದ ಹಾಗೇ ಈಗ ಇಲ್ಲ ಎಂಬ ಶಾಸಕರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ರಾಜಣ್ಣ, ಏನ್ ಮಾಡೋದು ಕಾಂಗ್ರೆಸ್ ನಲ್ಲಿ ಪವರ್ ಸೆಂಟರ್ ಗಳು ಜಾಸ್ತಿಯಾಗಿವೆ. ಒಂದು, ಎರಡು, ಮೂರು ಲೆಕ್ಕಕ್ಕೆ ಇಲ್ಲದಷ್ಟು ಆಗಿವೆ. ಎಷ್ಟು ಬೇಕಾದರೂ ಅಂದುಕೊಳ್ಳಬಹುದು.

2013ರಿಂದ 2018 ರವರೆಗೆ ಒಂದೇ ಪವರ್ ಸೆಂಟರ್ ಇತ್ತು. ಹೀಗಾಗಿ ಅವರಿಗೆ ಯಾವುದೇ ಒತ್ತಡ ಇರಲಿಲ್ಲ. ಆದರೆ ಈಗ ಪವರ್ ಸೆಂಟರ್ ಗಳು ಜಾಸ್ತಿಯಾಗಿವೆ ಹಾಗಾಗಿ ಜಂಜಾಟಗಳು ಹೆಚ್ಚುತ್ತಿವೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.


Related Articles

Back to top button