Belagavi NewsBelgaum NewsKannada NewsKarnataka News

*ಇಂದು ಈ ಜಿಲ್ಲೆಗಳಲ್ಲಿ ಆಗಲಿದೆ ಅಧಿಕ ಮಳೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದ ವಿವಿಧ ಭಾಗಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಭಾರೀ ಮಳೆಯಾಗುತ್ತಿರುವ ಕಾರಣ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಕರಾವಳಿ ಹಾಗೂ ಮಲೆನಾಡು ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನಲೆ ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. 

ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ವಿಜಯನಗರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಇನ್ನು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಹಾಸನ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ರಾಮನಗರ, ಬಳ್ಳಾರಿ, ಮೈಸೂರು, ಮಂಡ್ಯ ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆ ಅಬ್ಬರ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button