*ಮೇಯರ್ ಸೇರಿ ಇಬ್ಬರ ಪಾಲಿಕೆ ಸದಸ್ಯತ್ವ ರದ್ದು: ನಗರಾಭಿವೃದ್ಧಿ ಇಲಾಖೆ ಆದೇಶ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ತಿನಿಸು ಕಟ್ಟೆ ಮಳಿಗೆ ಪಡೆದ ವಿವಾದಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಹಾಲಿ ಮೇಯರ್ ಮಂಗೇಶ ಪವಾರ ಮತ್ತು ಪಾಲಿಕೆ ಸದಸ್ಯ ಜಯಂತ ಜಾಧವ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.
ಈ ಇಬ್ಬರೂ ತಮ್ಮ ಪತ್ನಿಯರ ಹೆಸರಿನಲ್ಲಿ ಮಳಿಗೆ ಪಡೆದಿದ್ದು, ಪಾಲಿಕೆ ಸದಸ್ಯರಾಗಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಸುಜಿತ್ ಮುಳಗುಂದ ಈ ಹಿಂದೆ ಪ್ರಾದೇಶಿಕ ಆಯುಕ್ತರಿಗೆ ದೂರು ಸಲ್ಲಿಸಿದ್ದರು. ಪ್ರಾದೇಶಿಕ ಆಯುಕ್ತರು ಈ ಇಬ್ಬರು ಸದಸ್ಯತ್ವ ರದ್ದುಗೊಳಿಸಿ ಆದೇಶ ಹೊರಡಿಸಿದ್ದರು.
ಆದರೆ ಅವರು ಹೈಕೋರ್ಟ್ ಮೆಟ್ಟಿಲೇರಿ ತಡೆಯಾಜ್ಞೆ ತಂದಿದದ್ದರು. ಈ ಮಧ್ಯೆ ಮಂಗೇಶ ಪವಾರ್ ಬೆಳಗಾವಿ ಮೇಯರ್ ಆಗಿ ಕೂಡ ಆಯ್ಕೆಯಾದರು.
ಈ ಪ್ರಕರಣ ಕುರಿತು ವಿಚಾರಣೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಹೈಕೋರ್ಟ್ ಸರಕಾರಕ್ಕೆ ನರ್ದೇಶನ ನೀಡಿತ್ತು. ಅದರಂತೆ ನಗರಾಭಿವದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ವಿಚಾರಣೆ ನಡೆಸಿ ಈ ಇಬ್ಬರ ಸದಸ್ಯತ್ವವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ, ವಾರ್ಡ್ ನಂಬರ್ 23 ಮತ್ತು 41 ಸ್ಥಾನಗಳು ತೆರವಾಗಿವೆ ಎಂದು ಘೋಷಿಸಿದ್ದಾರೆ.
ವಿವರಕ್ಕಾಗಿ ಈ ಲಿಂಕ್ ಕ್ಲಿಕ್ ಮಾಡಿ –