Karnataka News

ಬಲಿಷ್ಠ ಭಾರತ ನಿರ್ಮಾಣಕ್ಕೆ ಬಿಜೆಪಿಯನ್ನು ಬೆಂಬಲಿಸಿ

ಪ್ರಗತಿವಾಹಿನಿ ಸುದ್ದಿ, ಗೋಕಾಕ: ಬಲಿಷ್ಠ ಭಾರತ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಬಿಜೆಪಿಯನ್ನು ಈ ಉಪಚುನಾವಣೆಯಲ್ಲಿ ಬೆಂಬಲಿಸುವಂತೆ ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ಅವರು ಶುಕ್ರವಾರದಂದು ಗೋಕಾಕ ಮತಕ್ಷೇತ್ರದ ಹಿರೇನಂದಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಪರ ಮತಯಾಚಿಸಿ ಮಾತನಾಡಿದರು.
ಭವ್ಯ ಭಾರತದ ಕಲ್ಪನೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ವಿಶೇಷ ಯೋಜನೆಗಳ ಅನುಷ್ಠಾನದೊಂದಿಗೆ ಶ್ರಮಿಸುತ್ತಿದ್ದಾರೆ. ರಾಜ್ಯದಲ್ಲಿಯೂ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ಜನಪರ ಯೋಜನೆಗಳೊಂದಿಗೆ ರಾಜ್ಯದ ಅಭಿವೃದ್ಧಿಗಾಗಿ ಕಾರ್ಯ ಪ್ರವೃತ್ತವಾಗಿದ್ದು ಅವರ ಕೈ ಬಲಪಡಿಸಲು ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ತಮ್ಮ ಮತವನ್ನು ನೀಡಿ ಆಶೀರ್ವದಿಸಬೇಕೆಂದು ಕೋರಿದರು.

ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಮಾತನಾಡಿ, ರಮೇಶ ಜಾರಕಿಹೊಳಿ ಅವರು ಎಲ್ಲ ವರ್ಗಗಳ ಜನರೊಂದಿಗೆ ಬೆರೆತು ಜಾತ್ಯತೀತವಾಗಿ ಕ್ಷೇತ್ರದ ಅಭಿವೃದ್ಧಿ ಮಾಡಿದ್ದಾರೆ. ಆದರೆ ಕಾಂಗ್ರೇಸ್ ಸರ್ಕಾರ ಇವರಿಗೆ ಅನ್ಯಾಯ ಮಾಡಿದ್ದು ಆ ಅನ್ಯಾಯಕ್ಕೆ ಪ್ರತೀಕಾರ ತೋರಿಸಲು ರಮೇಶ ಅವರು ಯಡಿಯೂರಪ್ಪ ಅವರನ್ನು ಮೆಚ್ಚಿ ಸರ್ಕಾರ ರಚನೆಗೆ ಬಹುಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ಸವದತ್ತಿ ಶಾಸಕ ಆನಂದ ಮಾಮನಿ ಮಾತನಾಡಿ, ರಾಜ್ಯದಲ್ಲಿ ಯಡಿಯೂರಪ್ಪನವರ ಸರ್ಕಾರವನ್ನು ಬಲಪಡಿಸಲು ಅವರಿಗೆ ನೈತಿಕ ಶಕ್ತಿ ತುಂಬಲು ರಮೇಶ ಜಾರಕಿಹೊಳಿ ಅವರ ಆಯ್ಕೆ ಅಗತ್ಯವಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳು ಮತ್ತು ರಮೇಶ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳನ್ನು ಮನಗಂಡು ಮತದಾರರು ಬಿಜೆಪಿಯನ್ನು ಬೆಂಬಲಿಸುತ್ತಾರೆಂಬ ವಿಶ್ವಾಸ ವ್ಯಕ್ತಪಡಿಸಿದರು. ೭೫ಸಾವಿರ ಮತಗಳ ಅಂತರದೊಂದಿಗೆ ೬ನೇ ಬಾರಿಗೆ ವಿಧಾನಸಭೆಯನ್ನು ಪ್ರವೇಶಿಸಲಿದ್ದು ಇವರು ಸರ್ಕಾರದಲ್ಲಿ ಸಚಿವರಾಗಲಿದ್ದಾರೆ ಎಂದು ಹೇಳಿದರು.

ಮಾಜಿ ಶಾಸಕರೂ, ಬಿಜೆಪಿ ಜಿಲ್ಲಾ ಅಧ್ಯಕ್ಷರೂ ಆದ ಡಾ ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೂಳಪ್ಪ ಹೊಸಮನಿ, ಬಿಜೆಪಿ ಮುಖಂಡ ಈರಪ್ಪ ಕಡಾಡಿ, ಪ್ರಭಾ ಶುಗರ್ ಅಧ್ಯಕ್ಷ ಅಶೋಕ ಪಾಟೀಲ, ಗೋವಿಂದ ಕೊಪ್ಪದ, ಲಕ್ಷ್ಮಣ ತಪಸಿ, ಶಾಮಾನಂದ ಪೂಜೇರಿ ಸೇರಿದಂತೆ ಮುಂತಾದವರು ಇದ್ದರು.

 ಸರ್ವತೋಮುಖ ಅಭಿವೃದ್ಧಿಗಾಗಿ ಆಶೀರ್ವದಿಸಿ

ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರು ಶುಕ್ರವಾರದಂದು ಮದವಾಲ ಗ್ರಾಮದಲ್ಲಿ ಮತಯಾಚನೆ ಮಾಡಿ ಮಾತನಾಡಿದರು.

ಕಡಬಗಟ್ಟಿ, ಕನಸಗೇರಿ, ಈರನಟ್ಟಿ, ಮದವಾಲ, ಮುಸಲ್ಮಾರಿ, ಗೊಡಚಿನಮಲ್ಕಿ, ಮಲೇಬೈಲ್ ಗ್ರಾಮಗಳಲ್ಲಿ ರಮೇಶ ಜಾರಕಿಹೊಳಿ ಬಿರುಸಿನ ಪ್ರಚಾರ ನಡೆಸಿದರು.
ಯಡಿಯೂರಪ್ಪನವರ ಸಮರ್ಥ ನಾಯಕತ್ವವನ್ನು ಮೆಚ್ಚಿಕೊಂಡು ಬಿಜೆಪಿಯಿಂದ ಈ ಬಾರಿ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಕ್ಷೇತ್ರದ ಸರ್ವತೋಮುಖ ಏಳ್ಗೆಗಾಗಿ ನನಗೆ ಮತ ನೀಡಿ ಆಯ್ಕೆ ಮಾಡುವಂತೆ ಗೋಕಾಕ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರು ಮನವಿ ಮಾಡಿಕೊಂಡರು.
ತಾಲೂಕಿನ ಮದವಾಲ ಗ್ರಾಮದಲ್ಲಿ ಶುಕ್ರವಾರದಂದು ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಅಭಿವೃದ್ಧಿಯಾಗಬೇಕಾದರೆ ಅದು ಬಿಜೆಪಿಯಿಂದ ಮಾತ್ರ ಸಾಧ್ಯ. ಕಳೆದ ೨೦ ವರ್ಷಗಳಿಂದ ಕಾಂಗ್ರೇಸ್ ಪಕ್ಷದಲ್ಲಿ ಬಹಳ ನಿಷ್ಠೆಯಿಂದ ಕೆಲಸ ಮಾಡಿರುವೆ. ನಿಷ್ಠಾವಂತ ಕಾರ್ಯಕರ್ತರಿಗೆ ಅಲ್ಲಿ ಸೂಕ್ತ ಬೆಲೆ ಇಲ್ಲ. ಅಲ್ಲದೇ ಪಕ್ಷದ ಕೆಲ ನಾಯಕರ ಮಿತಿಮೀರಿದ ವರ್ತನೆಯಿಂದ ಮನಸ್ಸಿಗೆ ನೋವಾಗಿದೆ. ಅದನ್ನು ನಾಯಕರುಗಳ ಮುಂದೆ ಸಾಕಷ್ಟು ಬಾರಿ ಹೇಳಿಕೊಂಡರೂ ನಮ್ಮ ಭಾವನೆಗಳನ್ನು ಅರ್ಥಮಾಡಿಕೊಳ್ಳಲಿಲ್ಲ. ಅಧಿಕಾರದ ಹಿಂದೆ ಎಂದೂ ಜೋತುಬಿದ್ದವನಲ್ಲ. ಜನರ ಪ್ರೀತಿ ವಿಶ್ವಾಸವೇ ನನಗೆ ಮುಖ್ಯವಾಗಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಸೇರಿದ್ದೇನೆಯೇ ಹೊರತು ಯಾವುದೇ ವೈಯಕ್ತಿಕ ಸ್ವಾರ್ಥವಿಲ್ಲವೆಂದು ಹೇಳಿದರು.
ಡಿ.೫ ರಂದು ನಡೆಯುವ ಚುನಾವಣೆಯಲ್ಲಿ ಶೇಜ್ ನಂ. ೨ ಇದ್ದು, ಕಮಲ ಹೂವಿನ ಗುರ್ತಿಗೆ ಅಮೂಲ್ಯ ಮತ ನೀಡಿ ಆರನೇ ಬಾರಿಗೆ ಆಯ್ಕೆ ಮಾಡಿ ಆಶೀರ್ವಾದ ಮಾಡುವಂತೆ ಕೋರಿದ ಅವರು, ನೀವು ಹಾಕುವ ಮತ ನೇರವಾಗಿ ಸರ್ಕಾರಕ್ಕೆ ಹಾಕಿದಂತಾಗುತ್ತದೆ. ಯಡಿಯೂರಪ್ಪನವರ ಕೈ ಬಲಪಡಿಸಿದಂತಾಗುತ್ತದೆ ಎಂದು ರಮೇಶ ಜಾರಕಿಹೊಳಿ ಹೇಳಿದರು.
ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಿವಾನಂದ ಡೋಣಿ, ಭೀಮಗೌಡ ಪೊಲೀಸ್‌ಪಾಟೀಲ, ರಾಜು ತಳವಾರ, ಅಡಿವೆಪ್ಪ ನಾವಲಗಟ್ಟಿ, ಮಾರುತಿ ಅಲೇಕಾರ, ಶಿವಾನಂದ ಸಿಗ್ಗಾಂವಿ, ಸಿದಗೌಡ ಪಾಟೀಲ, ನಿಂಗಪ್ಪ ಜಾಡರ, ಮಲ್ಲಪ್ಪ ನಾಯಿಕ, ಬಸವಣ್ಣಿ ತೇಲಿ, ಮಲ್ಲಪ್ಪ ಹುನ್ನೂರ, ನಿಂಗಪ್ಪ ಜಾಡರ, ರಾಮಪ್ಪ ಬಣಗಾರ, ಅಪ್ಪಯ್ಯಾ ನೇಸರಗಿ, ಶಂಕರ ವಣ್ಣೂರ, ಬಾಳೇಶ ತಿಮ್ಮಗೋಳ, ಮಹಾಂತೇಶ ಹಟ್ಟಿಗೌಡರ, ಮುಂತಾದವರು ಉಪಸ್ಥಿತರಿದ್ದರು.
ರಮೇಶ ಜಾರಕಿಹೊಳಿ ಅವರು ಪಾದಯಾತ್ರೆ ಮೂಲಕ ಮತಯಾಚಿಸಿದರು. ಕಡಬಗಟ್ಟಿ, ಕನಸಗೇರಿ, ಈರನಟ್ಟಿ, ಮುಸಲ್ಮಾರಿ, ಗೊಡಚಿನಮಲ್ಕಿ, ಮಲೇಬೈಲ್ ಗ್ರಾಮಗಳಲ್ಲಿ ರಮೇಶ ಜಾರಕಿಹೊಳಿ ಅವರು ಪ್ರಚಾರ ಸಭೆಯಲ್ಲಿ ಭಾಗವಹಿಸಿದರು.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button